ಕಿಲ್ಲರ್ ದರ್ಶನ್ ಕೇಸ್ ನಲ್ಲಿ 7 ಜನ ಜೈಲು ಅಧಿಕಾರಿಗಳು ಸಸ್ಪೆಂಡ್, ಬೇರೆ ಕಾರಗೃಹಕ್ಕೆ ಶಿಫ್ಟ್ ಮಾಡಲು ಸಿಎಂ, ಸಿದ್ದರಾಮಯ್ಯ, ಆದೇಶ…!!!

Listen to this article

ನಟ ದರ್ಶನ್ ಅವರಿಗೆ ಜೈಲಲ್ಲಿ ಎಲ್ಲಾ ಸೌಲಭ್ಯ ಸಿಗುತ್ತಿದೆಯೇ ಎನ್ನುವ ಪ್ರಶ್ನೆ ಮೂಡಿಸುವಂತ ಫೋಟೋ ಒಂದು ವೈರಲ್ ಆಗಿದೆ. ದರ್ಶನ್ ಇದರಲ್ಲಿ ಕಾಫಿ ಕುಡಿಯುತ್ತಾ, ಸಿಗರೇಟ್ ಸೇದುತ್ತಿರುವ ಫೋಟೋ ಇದೆ. ಆರೋಪಿ ದರ್ಶನ್​ಗೆ ಪರಪ್ಪನ ಅಗ್ರಹಾರ ಜೈಲಿನಲ್ಲೇ ಎಲ್ಲಾ ಸೌಲಭ್ಯ ಸಿಗುತ್ತಿದೆ ಎನ್ನಲಾಗಿದೆ.

ಈ ಪ್ರಕರಣದಲ್ಲಿ ಏಳು ಜನರನ್ನು ಸಸ್ಪೆಂಡ್ ಮಾಡಲಾಗಿದೆ.

ನಟ ದರ್ಶನ್ ಅವರು ಕೇಂದ್ರ ಕಾರಾಗೃಹದಲ್ಲಿ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಜೈಲಿನಲ್ಲಿ ಕುಳಿತು ಸಿಗರೇಟ್ ಸೇದುತ್ತಾ, ಕಾಫಿ ಕುಡಿಯುತ್ತಾ ಇದ್ದರು. ಈ ಫೋಟೋ ವೈರಲ್ ಆಗಿತ್ತು. ಇದರ ಜೊತೆಗೆ ದರ್ಶನ್ ಅವರು ವಿಡಿಯೋ ಕಾಲ್ ಮಾಡಿ ಮಾತನಾಡಿದ್ದರು. ಈ ಬಗ್ಗೆ ಗೃಹಸಚಿವ ಜಿ. ಪರಮೇಶ್ವರ್ ಮಾತನಾಡಿದ್ದಾರೆ. ಜೈಲಿನ ಏಳು ಅಧಿಕಾರಿಗಳನ್ನು ಅವರು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.

‘ಈ ಪ್ರಕರಣದಲ್ಲಿ ಏಳು ಅಧಿಕಾರಿಗಳನ್ನು ನಾವು ಸಸ್ಪೆಂಡ್ ಮಾಡಿದ್ದೇವೆ. ನಾನು ವರದಿಯನ್ನು ಕೇಳಿದ್ದೇವೆ. ಈ ರೀತಿಯ ಘಟನೆ ನಡೆಯಬಾರದು. ಕೆಲವರನ್ನು ಸಸ್ಪೆಂಡ್ ಮಾಡಿದ್ದು, ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಮೇಲಧಿಕಾರಿಗಳನ್ನು ಟ್ರಾನ್ಸ್​ಫಾರ್​​ ಮಾಡ್ತೇನೆ. ಪದೇ ಪದೇ ಈ ರೀತಿ ಆಗಬಾರದು. ಎಲ್ಲಾ ಬಂಧಿಕಾನೆಗಳಲ್ಲಿ ಸಿಸಿಟಿವ ಹಾಕುತ್ತಿದ್ದೇವೆ. ಜಾಮರ್ ಹಾಕಲಾಗುತ್ತಿದೆ. ಆದಾಗ್ಯೂ ಈ ರೀತಿಯ ಘಟನೆ ನಡೆಯುತ್ತಿದೆ’ ಎಂದು ಪರಮೇಶ್ವರ್ ಬೇಸರ ಹೊರಹಾಕಿದ್ದಾರೆ.

‘ಮೇಲಧಿಕಾರಿಗಳು ಈ ಪ್ರಕರಣದಲ್ಲಿ ನೇರವಾಗಿ ಭಾಗಿ ಆಗಿದ್ದರೆ ಅವರನ್ನು ತೆಗೆದು ಹಾಕುತ್ತೇವೆ. ವರದಿ ಬಂದ ನಂತರ ಈ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ’ ಎಂದು ಪರಮೇಶ್ವರ್ ಅವರು ಭರವಸೆ ನೀಡಿದ್ದಾರೆ. ಊಟದ ವಿಚಾರ ಬಗ್ಗೆಯೂ ಅವರು ಮಾತನಾಡಿದ್ದಾರೆ. ‘ದರ್ಶನ್​ಗೆ ಚಿಕನ್ ಬಿರಿಯಾನಿ ಕೊಟ್ಟಿಲ್ಲ. ಜೈಲಿನ ನಿಯಮದಂತೆ ನಡೆಯಲಾಗುತ್ತಿದೆ. ಈಗ ನಡೆದ ಘಟನೆ ಸಮರ್ಥಿಸಿಕೊಳ್ಳುತ್ತಿಲ್ಲ’ ಎಂದಿದ್ದಾರೆ ಪರಮೇಶ್ವರ್.

ಜೈಲಿನಲ್ಲಿ ಜಾಮರ್ ಹಾಕಿ ಹೈ ಪ್ರೀಕ್ವೆನ್ಸಿ ಇಡಲಾಗಿತ್ತಂತೆ. ಇದರಿಂದ ಪಕ್ಕದ ಏರಿಯಾಗಳಿಗೆ ತೊಂದರೆ ಆಗಿತ್ತು. ಹೀಗಾಗಿ, ಸದ್ಯ ಪ್ರೀಕ್ವೆನ್ಸಿ ಕಡಿಮೆ ಮಾಡಲಾಗಿದೆ. ‘ಫೋಟೋ ಯಾರು ತೆಗೆದರು? ಯಾರ ಮೊಬೈಲ್​ನಲ್ಲಿ ತೆಗದಿದ್ದಾರೆ ಅನ್ನೋದು ಮುಖ್ಯ ಆಗುತ್ತದೆ’ ಎಂದು ಪರಮೇಶ್ವರ್ ಹೇಳಿದ್ದಾರೆ.

ಸಸ್ಪೆಂಡ್ ಆದವರು ಯಾರು?

ಜೈಲರ್​​​ಗಳಾದ ಶರಣಬಸವ ಅಮೀನ್​​ಗಢ, ಖಂಡೇವಾಲ್, ಸಹಾಯಕ ಜೈಲರ್​ಗಳಾದ ಪುಟ್ಟಸ್ವಾಮಿ, ಶ್ರೀಕಾಂತ್​ ತಲವಾರ್​, ಜೈಲಿನ ಹೆಡ್​​ ವಾರ್ಡರ್​ಗಳಾದ ವೆಂಕಪ್ಪ, ಸಂಪತ್, ವಾರ್ಡರ್​​​ ಬಸಪ್ಪ ಅವರನ್ನು ಅಮಾನತುಗೊಂಡವರು.. ಇನ್ನೊಂದು ಹೇಳಬೇಕೆಂದರೆ ಒಳ್ಳೆಯ ಊಟದ ಜೊತೆಗೆ ಕಿಕ್ಕೇರಿಸೋಕೆ ಎಣ್ಣೆಯೂ ಸಹ ಸಿಗುತ್ತಿದೆ ಎನ್ನಲಾಗುತ್ತಿದೆ, ಇದರ ಜೊತೆಗೆ ಇನ್ನೇನೂ ಸಿಗುತ್ತದೆ ಎನ್ನುವುದು ತನಿಖೆಯ ನಂತರ ಗೊತ್ತಾಗಲಿದೆ…

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend