ಕೂಡ್ಲಿಗಿಯ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಅಂಗವಾಗಿ ಸೌಹಾರ್ದ ಸಭೆ…!!!

Listen to this article

ಕೂಡ್ಲಿಗಿಯ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಅಂಗವಾಗಿ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಕೂಡ್ಲಿಗಿ ಸಿ. ಪಿ ಐ ಸುರೇಶ ಅವರು ಅನೇಕ ವರ್ಷಗಳಿಂದ ಗಣೇಶ ಉತ್ಸವ ಆಚರಿಸುತ್ತಾ ಬರಲಾಗುತ್ತಿದೆ. ಅದರಂತೆ ಎಲ್ಲ ಸಮಾಜದವರು ಅನ್ನೋನ್ಯತೆಯಿಂದ ಹಬ್ಬಗಳನ್ನು ಆಚರಿಸುತ್ತಾ ಬಂದಿದ್ದಾರೆ.

ಗಣೇಶ ಉತ್ಸವ ಹಾಗೂ ಈದ್ ಮಿಲಾದ್ ಹಬ್ಬ ಸೌಹಾರ್ದದ ಸಂದೇಶ ಸಾರಬೇಕೇ ಹೊರತು, ಯಾವುದೇ ಅಹಿತರ ಘಟನೆಗೆ ಕಾರಣವಾಗದಂತೆ ಎರಡೂ ಹಬ್ಬಗಳನ್ನು ಆಚರಿಸಬೇಕು ಎಂದು ಕೂಡ್ಲಿಗಿ ಸಿ. ಪಿ. ಐ ಸುರೇಶ ಅವರು ತಿಳಿಸಿದರು.

ಪ್ರತಿ ವರ್ಷ ದಂತೆ ಈ ವರ್ಷವೂ ಶಾಂತ ರೀತಿಯಲ್ಲಿಯೇ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳಬೇಕು. ಅದಕ್ಕೆ ಬೇಕಾದ ಎಲ್ಲ ಸಹಕಾರವನ್ನು ಇಲಾಖೆ ನೀಡಲಿದೆ. ಹಬ್ಬದ ಸಂದರ್ಭದಲ್ಲಿ ಶಾಂತಿಗೆ ಭಂಗ ತರುವ ಯತ್ನ ಮಾಡಿದರೇ ಅಂಥವರ ವಿರುದ್ದ ಇಲಾಖೆ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ, ಧ್ವನಿವರ್ಷಕ ಬಳಕೆಗೆ ಪೊಲೀಸ್ ಠಾಣೆಯಲ್ಲಿ ಪರವಾನಗಿಯನ್ನು ಕಡ್ಡಾಯವಾಗಿ ಪಡೆಯಬೇಕು. ಡಿಜೆ ಬಳಸುವಂತಿಲ್ಲ, ಸರ್ಕಾರದ ಆದೇಶ ಪಾಲನೆ ಮಾಡಬೇಕು ಎಂದರು.

ಎರಡು ಸ್ಪೀಕರ್ ಬಾಕ್ಸ್ಗೆ ಮಾತ್ರ ಅವಕಾಶವಿದೆ. ಹಾಗೆ ಈದ್ ಮಿಲಾದ್ ಹಬ್ಬದ ಆಚರಣೆ ವೇಳೆ ಯಾವುದೇ ಅಹಿತಕರ ಘಟನೆಗಳು ಆಗದಂತೆ ನೋಡಿಕೊಳ್ಳಲು ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಲಾಗುವುದು.

ಈ ಸಂದರ್ಭದಲ್ಲಿ ಪಿಎಸ್‌ಐ ಪ್ರಕಾಶ್ ಸೇರಿದಂತೆ ಕೂಡ್ಲಿಗಿ ಆದ್ಯಂತ ಪಟ್ಟಣ ಪಂಚಾಯತಿಯ ಅಧ್ಯಕ್ಷರು, ಸರ್ವ ಸದಸ್ಯರು, ಆಯಾ ಸಮುದಾಯದ ಮುಖಂಡರು, ಮುಸ್ಲಿಂ ಸಮುದಾಯದ ಮುಖಂಡರು, ಗಣೇಶ ಕಮಿಟಿಯ ಸರ್ವ ಪದಾಧಿಕಾರಿಗಳು, ಪೋಲಿಸ್ ಇಲಾಖೆ ಸಿಬ್ಬಂದಿಗಳು ಇದ್ದರು…

ವರದಿ. ಎಂ. ಬಸವರಾಜ್, ಕಕ್ಕುಪ್ಪೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend