ಪತ್ರಕರ್ತರಿಗೆ ಬೆದರಿಕೆ ಹಾಕಿದರೆ ರೂ. 50 ಸಾವಿರ ದಂಡ, 24 ಗಂಟೆಯೊಳಗೆ ಜೈಲಿಗೆ: ಪ್ರಧಾನಿ ಮೋದಿ…!!!

Listen to this article

ಪತ್ರಕರ್ತರಿಗೆ ಬೆದರಿಕೆ ಹಾಕಿದರೆ ರೂ. 50 ಸಾವಿರ ದಂಡ, 24 ಗಂಟೆಯೊಳಗೆ ಜೈಲಿಗೆ: ಪ್ರಧಾನಿ ಮೋದಿ

ನವದೆಹಲಿ: ಭಾರತದಲ್ಲಿ ಪತ್ರಿಕೋದ್ಯಮವು ಬಿಕ್ಕಟ್ಟಿನ ಅವಧಿಯನ್ನು ಎದುರಿಸುತ್ತಿದೆ. ಸತ್ಯದ ಧ್ವನಿ ಎತ್ತುವ ಪತ್ರಕರ್ತರ ಮೇಲಿನ ಹಲ್ಲೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಪತ್ರಕರ್ತರ ಸುರಕ್ಷತೆ ವಿಚಾರದಲ್ಲಿ ಭಾರತ ಅತ್ಯಂತ ಅಪಾಯಕಾರಿ ರಾಷ್ಟ್ರಗಳ ಸ್ಥಾನದಲ್ಲಿದೆ. ದೇಶದಲ್ಲಿ ಪ್ರತಿ ವರ್ಷ ನೂರಾರು ಪತ್ರಕರ್ತರು ವರದಿ ಮಾಡುವಾಗ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಸುದ್ದಿ ನೀಡುವ ವೇಳೆ ಪತ್ರಕರ್ತರನ್ನು ಬೆದರಿಸುವುದು ಸಾಮಾನ್ಯವಾಗಿದೆ. ಆದರೆ ಈಗ ಪತ್ರಕರ್ತರಿಗೆ ಇಂತಹ ಬೆದರಿಕೆ ಹಾಕುವವರು ಸುಸ್ಥಿತಿಯಲ್ಲಿಲ್ಲ.

ಈಗ ಯಾರಾದರೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿದರೆ ಜೈಲಿಗೆ ಹೋಗಬೇಕಾಗಬಹುದು. ಅಲಹಾಬಾದ್ ಹೈಕೋರ್ಟ್ ಹೇಳಿಕೆಯ ನಂತರ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ನಾಡಿನ ಪತ್ರಕರ್ತರೊಂದಿಗೆ ಅಸಭ್ಯವಾಗಿ ವರ್ತಿಸುವ ಅಥವಾ ಬೆದರಿಕೆ ಹಾಕಲು ಪ್ರಯತ್ನಿಸುವವರಿಗೆ ರೂ. ೫೦ ಸಾವಿರ ರೂಪಾಯಿ ದಂಡ ವಿಧಿಸಲಾಗುವುದು ಎಂದು ಘೋಷಿಸಿದ್ದಾರೆ.

ಪತ್ರಕರ್ತರನ್ನು ಬೆದರಿಸುವವರಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು. ಬೆದರಿಕೆ ಆರೋಪದ ಮೇಲೆ ಬಂಧಿತರಾದವರಿಗೆ ಸುಲಭವಾಗಿ ಜಾಮೀನು ಸಹ ಸಿಗುವು ದಿಲ್ಲ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಆದ್ದರಿಂದ ಪತ್ರಕರ್ತರ ಜೊತೆ ಯಾವುದೇ ರೀತಿಯ ಅಸಭ್ಯ ವರ್ತನೆ ಮಾಡಬೇಡಿ. ಪತ್ರಕರ್ತರಿಗೆ ಗೌರವ ಕೊಡುವ ಕೆಲಸ ಮಾಡಿ ಎಂದು ಖುದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರೇ ಹೇಳಿದ್ದರೆ.

ಇತ್ತೀಚಿಗೆ ಮಹಾರಾಷ್ಟ್ರದಲ್ಲಿ ಮಾಧ್ಯಮದವರ ಮೇಲೆ ಹಿಂಸಾಚಾರ ಅಥವಾ ಮಾಧ್ಯಮದವರ ಮತ್ತು ಮಾಧ್ಯಮ ಸಂಸ್ಥೆಗಳ ಆಸ್ತಿಪಾಸ್ತಿಗಳಿಗೆ ಹಾನಿಯಾದ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ಯಾವುದೇ ಪತ್ರಕರ್ತರಿಗೆ ಯಾವುದೇ ರೀತಿಯ ಸಮಸ್ಯೆ ಎದುರಾದರೆ ಕೂಡಲೇ ಅವರನ್ನು ಸಂಪರ್ಕಿಸಿ ಪತ್ರಕರ್ತರಿಗೆ ಬೆದರಿಕೆ ಹಾಕುವವರನ್ನು 24 ಗಂಟೆಯೊಳಗೆ ಜೈಲಿಗೆ ಕಳುಹಿಸಲಾಗುವುದು ಎಂದು ಸಿಎಂ ಯೋಗಿ ಆದಿತ್ಯನಾಥ್ ಎಚ್ಚರಿಕೆ ನೀಡಿದ್ದಾರೆ. ಹಾಗೂ ಪತ್ರಕರ್ತರನ್ನು ಗುರಿಯಾಗಿಸಿಕೊಂಡವರು ಅವರೊಂದಿಗೆ ಇನ್ನುಮುಂದೆ ಗೌರವಯುತವಾಗಿ ನಡೆದುಕೊಳ್ಳಬೇಕು. ಇದು ಪತ್ರಕರ್ತರ ಬಗ್ಗೆ ಅಸಹನೆಯಿಂದ ವರ್ತಿಸುವವರಿಗೆ ದುಬಾರಿಯಾಗಬಹುದು ಎಂದು ಸಿಎಂ ಯೋಗಿ ಆದಿತ್ಯನಾಥ್ ಕಟ್ಟುನಿಟ್ಟಿನ ಧ್ವನಿಯಲ್ಲಿ, ಖಡಕ್ ಆಗಿಯೇ ಎಚ್ಚರಿಕೆ ನೀಡಿದ್ದಾರೆ…

ವರದಿ. ಎಂ. ಬಸವರಾಜ್, ಕಕ್ಕುಪ್ಪೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend