ನಿಂಗನಗೌಡ ಚನಬಸನಗೌಡರಗೆ ಅತ್ಯುತ್ತಮ ಕಂದಾಯ‌ ಅಧಿಕಾರಿ ಪ್ರಶಸ್ತಿ…!!!

Listen to this article

ನಿಂಗನಗೌಡ ಚನಬಸನಗೌಡರಗೆ ಅತ್ಯುತ್ತಮ ಕಂದಾಯ‌ ಅಧಿಕಾರಿ ಪ್ರಶಸ್ತಿ

ಬೆಳಗಾವಿ: ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿರುವ ಕಂದಾಯ ಅಧಿಕಾರಿಗಳಿಗೆ ನೀಡಲಾಗುವ “ಅತ್ಯುತ್ತಮ ಕಂದಾಯ ಅಧಿಕಾರಿ-2024” ಪ್ರಶಸ್ತಿಯು ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ವಿಪತ್ತು ನಿರ್ವಹಣಾ ಸಮಾಲೋಚಕರಾಗಿರುವ ನಿಂಗನಗೌಡ ಚನಬಸನಗೌಡರ ಅವರಿಗೆ ಲಭಿಸಿದೆ.

ಕಂದಾಯ ಇಲಾಖೆಯ ಸಚಿವರಾದ ಕೃಷ್ಣಭೈರೇಗೌಡ ಅವರು ಬೆಂಗಳೂರಿನ ವಿಕಾಸಸೌಧದಲ್ಲಿ ಶುಕ್ರವಾರ ಜರುಗಿದ ಸಮಾರಂಭದಲ್ಲಿ ನಿಂಗನಗೌಡ ಅವರಿಗೆ “ಅತ್ಯುತ್ತಮ ಕಂದಾಯ ಅಧಿಕಾರಿ-2024” ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ವಿ.ರಶ್ಮಿ ಸೇರಿದಂತ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ವರದಿ. ಮಹಾಲಿಂಗ ಗಗ್ಗರಿ, ಬೆಳಗಾವಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend