ಬಳ್ಳಾರಿಯಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಪ್ರವಾಸಿ ತಾಣಗಳ ವೀಕ್ಷಣೆಯಿಂದ ಆಹ್ಲಾದಕ ಅನುಭವ: ಮುಂಡರಗಿ ನಾಗರಾಜ…!!!

Listen to this article

ಬಳ್ಳಾರಿಯಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ
ಪ್ರವಾಸಿ ತಾಣಗಳ ವೀಕ್ಷಣೆಯಿಂದ ಆಹ್ಲಾದಕ ಅನುಭವ: ಮುಂಡರಗಿ ನಾಗರಾಜ

ಬಳ್ಳಾರಿ:ನಮ್ಮ ಸುತ್ತಮುತ್ತಲಿನ ಐತಿಹಾಸಿಕ ಸ್ಥಳಗಳನ್ನು ತಪ್ಪದೇ ವೀಕ್ಷಿಸಬೇಕು. ಪ್ರವಾಸಿ ತಾಣಗಳ ವೀಕ್ಷಣೆಯಿಂದ ಮನಸ್ಸಿಗೆ ಆಹ್ಲಾದಕ ಅನುಭವ ದೊರೆಯುತ್ತದೆ ಎಂದು ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಇಲಾಖೆ ಹಾಗೂ ಹೋಟೆಲ್ ಮಾಲೀಕರ ಸಂಘದ ಸಹಯೋಗದೊಂದಿಗೆ ನಗರದ ಐತಿಹಾಸಿಕ ಕೋಟೆ ಮುಂಭಾಗದ ಆವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿಶ್ವ ವಿಖ್ಯಾತ ಹಂಪಿ ಹಾಗೂ ತುಂಗಾಭದ್ರಾ ಡ್ಯಾಂ ಪ್ರವಾಸಿ ತಾಣಗಳು ಬಳ್ಳಾರಿ ಜಿಲ್ಲೆಯನ್ನು ಬೇರ್ಪಟ್ಟವು. ಆದರೂ ನಮ್ಮ ಜಿಲ್ಲೆಯಲ್ಲಿ ಸಂಡೂರಿನ ಕುಮಾರಸ್ವಾಮಿ ದೇವಸ್ಥಾನ, ಸ್ವಾಮಿಮಲೈ ಅರಣ್ಯ ಕ್ಷೇತ್ರ, ನಾರಿಹಳ್ಳ ಜಲಾಶಯ, ಬಳ್ಳಾರಿಯ ಐತಿಹಾಸಿಕ ಕೋಟೆ, ಮಿಂಚೇರಿ ಬೆಟ್ಟ, ಸಂಗನಕಲ್ಲು ಗುಡ್ಡ, ಸಿರುಗುಪ್ಪದ ಕೆಂಚನಗುಡ್ಡ, ಕುರುಗೋಡಿನ ದೊಡ್ಡ ಬಸವೇಶ್ವರ ದೇವಸ್ಥಾನ ಸೇರಿದಂತೆ ಅನೇಕ ಪ್ರವಾಸಿ ತಾಣಗಳಿದ್ದು, ಜನಸಾಮಾನ್ಯರು ಈ ಸ್ಥಳಗಳಿಗೆ ಭೇಟಿ ನೀಡಿ ಸ್ಥಳೀಯ ಪ್ರವಾಸಿ ತಾಣಗಳನ್ನು ವೀಕ್ಷಿಸಬೇಕು ಎಂದರು.
ಬಳ್ಳಾರಿಯಲ್ಲೂ ರಾಷ್ಟçಪಿತರ ಚಿತಾಭಸ್ಮ:
ರಾಷ್ಟಪಿತ ಮಹಾತ್ಮ ಗಾಂಧೀಜಿಯವರ ಚಿತಾಭಸ್ಮವು ನಗರದ ರೇಡಿಯೋ ಪಾರ್ಕ್ನ ಪಿಸಿಹೆಚ್ ಕಾಲೇಜು ಆವರಣದಲ್ಲಿರುವುದು ವಿಶೇಷವಾಗಿದೆ. ಈ ಹಿಂದೆ ಗಾಂಧೀಜಿಯವರು ನಗರದ ರೈಲ್ವೇ ನಿಲ್ದಾಣದಲ್ಲಿ ತಂಗಿದ್ದು, ನಂತರ ಸಂಡೂರಿಗೆ ತೆರಳಿ ಅಲ್ಲಿನ ಪ್ರಕೃತಿ ಸೌಂದರ್ಯ ಸವೆದು “ಸೀ ಸಂಡೂರು ಇನ್ ಸೆಪ್ಟಂಬರ್” ಎನ್ನುವ ಮಾತನ್ನು ಹೇಳಿದ್ದು ಸಂತಸದ ವಿಷಯವಾಗಿದೆ ಎಂದರು.
ಮುoದಿನ ಪೀಳಿಗೆಯು ಇತಿಹಾಸ ಅರಿತುಕೊಳ್ಳಲು ಐತಿಹಾಸಿಕ ಪ್ರವಾಸಿ ತಾಣಗಳನ್ನು ವೀಕ್ಷಿಸಿ ಸಂರಕ್ಷಿಸಿ, ಪೋಷಣೆ ಮಾಡಬೇಕು ಎಂದು ತಿಳಿಸಿದರು.
ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್ ಅವರು ಮಾತನಾಡಿ, ಪ್ರವಾಸೋದ್ಯಮ ಮಹತ್ವವನ್ನು ಅಂತರಾಷ್ಟಿಯ ಮಟ್ಟದಲ್ಲಿ ಜಾಗೃತಿ ಮೂಡಿಸುವ ನಿಮಿತ್ತವಾಗಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಆಚರಿಸಲಾಗುತ್ತಿದ್ದು, ದೇಶ-ದೇಶಗಳ ಮಧ್ಯೆ ಉತ್ತಮ ಬಾಂಧವ್ಯ ಬೆಸೆಯಲು ಪ್ರವಾಸೋದ್ಯಮವು ಸಹಕಾರಿಯಾಗಿದೆ ಎಂದು ಹೇಳಿದರು.


ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಮಾತನಾಡಿ, ದೇಶ ಸುತ್ತು-ಕೋಶ ಓದು ಎನ್ನುವ ಗಾದೆ ಮಾತಿನಂತೆ ಪ್ರತಿಯೊಬ್ಬರೂ ಪುಸ್ತಕದ ಓದಿನ ಜೊತೆಗೆ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದಾಗ ಮಾತ್ರ ಜಗತ್ತಿನ ಸಾಂಸ್ಕೃತಿಕ, ಭೌಗೋಳಿಕ ಮತ್ತು ಆರ್ಥಿಕ ಸ್ಥಿತಿಗತಿಗಳನ್ನು ಅರಿಯಲು ಸಾಧ್ಯವಾಗುತ್ತದೆ ಎಂದರು.
ಐತಿಹಾಸಿಕ, ನೈಸರ್ಗಿಕ ತಾಣಗಳ ವೀಕ್ಷಣೆಯಿಂದ ಇತಿಹಾಸದ ಕುರಿತು ಕುತೂಹಲ ಸೃಷ್ಟಿಯಾಗಿ ಜ್ಞಾನ ವೃದ್ಧಿಯಾಗಲಿದೆ. ಜನಸಾಮಾನ್ಯರು ವೀಕ್ಷಣೆ ತಾಣಗಳ ಕುರಿತು ಒಬ್ಬರಿಗೊಬ್ಬರೂ ವಿವರಿಸುತ್ತಾ ಜನಪ್ರಿಯತೆಗೊಳಿಸಬೇಕು. ಪ್ರವಾಸೋದ್ಯಮ ಆಯಾಮಗಳನ್ನು ಅರಿತುಕೊಂಡು ಐತಿಹಾಸಿಕ ಪ್ರಾಮುಖ್ಯತೆ ತಿಳಿದುಕೊಳ್ಳಬೇಕು ಎಂದು ಹೇಳಿದರು.
ಶಾಲಾ ಮಕ್ಕಳಿಗೆ ಪ್ರವಾಸ:
ಜಿಲ್ಲೆಯ ಡಿಎಂಎಫ್ ಅನುದಾನಡಿ 9ನೇ ತರಗತಿ ಶಾಲಾ ಮಕ್ಕಳಿಗೆ “ಆಡಳಿತ ಪ್ರವಾಸೋದ್ಯಮ” ಯೋಜನೆಯಡಿ ಸಂಡೂರು ನೈಸರ್ಗಿಕ ಪ್ರವಾಸಿ ತಾಣ, ಜಿಲ್ಲಾಧಿಕಾರಿ ಕಚೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ, ರಾಬರ್ಟ್ ಬ್ರೂಸ್‌ಫೂಟ್ ಪ್ರಾಕ್ತನ ವಸ್ತು ಸಂಗ್ರಾಲಯ ಸೇರಿದಂತೆ ನಾನಾ ಸ್ಥಳಗಳಿಗೆ ವಿದ್ಯಾರ್ಥಿಗಳನ್ನು ಕರೆದೊಯ್ಯಲಾಗುತ್ತದೆ ಎಂದು ತಿಳಿಸಿದರು.
ಇದೇ ವೇಳೆ ಪ್ರವಾಸಿ ಮಿತ್ರ ರಕ್ಷಣಾ ಸಿಬ್ಬಂದಿಗಳಿಗೆ ಪ್ರಶಂಸೆ ಪತ್ರ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಸಹಾಯಕ ಸಂರಕ್ಷಣಾಧಿಕಾರಿ ರವೀಂದ್ರ, ಹೋಟೆಲ್ ಮಾಲೀಕರ ಸಂಘದ ಕಾರ್ಯದರ್ಶಿ ವಿಕ್ರಮ್ ಪೋಲಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿ ಶ್ರೀಹರಿ ಮಾಸನೂರು ಸೇರಿದಂತೆ ಸಿಬ್ಬಂದಿ, ಪ್ರವಾಸಿ ಮಾರ್ಗದರ್ಶಕರು ಹಾಗೂ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend