ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ : ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭೇಟಿ – ಪರಿಶೀಲನೆ…!!!

Listen to this article

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ : ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭೇಟಿ – ಪರಿಶೀಲನೆ

▪️ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಜಿಲ್ಲೆಯಲ್ಲಿ ಇಂದು ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

▪️ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇರ ನೇಮಕಾತಿಗಾಗಿ ಜಿಲ್ಲೆಯ 28 ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಿತು. ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿಕೊಟ್ಟು ವ್ಯಾಪಕವಾಗಿ ಪರಿಶೀಲಿಸಿದರು.

▪️ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿಯೂ ಪಾರದರ್ಶಕ ಹಾಗೂ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಲು ಕೈಗೊಳ್ಳಲಾಗಿದ್ದ ವ್ಯವಸ್ಥೆಗಳನ್ನು ಜಿಲ್ಲಾಧಿಕಾರಿಯವರು ವೀಕ್ಷಿಸಿದರು. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮಾರ್ಗಸೂಚಿಗಳನ್ವಯ ಮತ್ತು ನಿರ್ದೇಶನಗಳನ್ನು ಪಾಲಿಸುತ್ತಿರುವ ಬಗ್ಗೆ ಜಿಲ್ಲಾಧಿಕಾರಿಯವರು ಖುದ್ದು ಪರಿಶೀಲಿಸಿದರು.

▪️ಪರೀಕ್ಷಾ ಕೇಂದ್ರಗಳಲ್ಲಿರುವ ಪರೀಕ್ಷಾ ಕೊಠಡಿಗಳಿಗೂ ಭೇಟಿ ನೀಡಿ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಯುತ್ತಿರುವ ಬಗ್ಗೆ ಜಿಲ್ಲಾಧಿಕಾರಿ ವೀಕ್ಷಣೆ ಮಾಡಿದರು. ಪರೀಕ್ಷಾ ಕೇಂದ್ರಗಳಲ್ಲಿ ನಿರ್ವಹಿಸುತ್ತಿರುವ ಕಾರ್ಯಗಳು, ಮಾಡಲಾಗಿರುವ ಸಕಲ ವ್ಯವಸ್ಥೆಗಳ ಕುರಿತು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಪರೀಕ್ಷಾ ಕೇಂದ್ರದ ನಿಯೋಜಿತ ಮುಖ್ಯಸ್ಥರಿಂದ ಮಾಹಿತಿ ಪಡೆದರು.

▪️ಚಾಮರಾಜನಗರ ಜಿಲ್ಲೆಯಲ್ಲಿ ಒಟ್ಟು 8771 ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಈ ಪೈಕಿ 1411 ಅಭ್ಯರ್ಥಿಗಳು ಪರೀಕ್ಷೆಗೆ ಗೈರುಹಾಜರಾಗಿದ್ದರು. 7360 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

▪️ಚಾಮರಾಜನಗರ ತಾಲೂಕಿನಲ್ಲಿ 10 ಪರೀಕ್ಷಾ ಕೇಂದ್ರಗಳಿದ್ದು, 2880 ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಈ ಪೈಕಿ 445 ಅಭ್ಯರ್ಥಿಗಳು ಪರೀಕ್ಷೆಗೆ ಗೈರುಹಾಜರಾಗಿದ್ದರು. 2435 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

▪️ಗುಂಡ್ಲುಪೇಟೆ ತಾಲೂಕಿನಲ್ಲಿ 4 ಪರೀಕ್ಷಾ ಕೇಂದ್ರಗಳಿದ್ದು, 1619 ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಈ ಪೈಕಿ 262 ಅಭ್ಯರ್ಥಿಗಳು ಪರೀಕ್ಷೆಗೆ ಗೈರುಹಾಜರಾಗಿದ್ದರು. 1357 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

▪️ಯಳಂದೂರು ತಾಲೂಕಿನಲ್ಲಿ 2 ಪರೀಕ್ಷಾ ಕೇಂದ್ರಗಳಿದ್ದು, 438 ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಈ ಪೈಕಿ 62 ಅಭ್ಯರ್ಥಿಗಳು ಪರೀಕ್ಷೆಗೆ ಗೈರುಹಾಜರಾಗಿದ್ದರು. 376 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

▪️ಕೊಳ್ಳೇಗಾಲ ತಾಲೂಕಿನಲ್ಲಿ 9 ಪರೀಕ್ಷಾ ಕೇಂದ್ರಗಳಿದ್ದು, 2856 ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಈ ಪೈಕಿ 465 ಅಭ್ಯರ್ಥಿಗಳು ಪರೀಕ್ಷೆಗೆ ಗೈರುಹಾಜರಾಗಿದ್ದರು. 2391 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

▪️ಹನೂರು ತಾಲೂಕಿನಲ್ಲಿ 3 ಪರೀಕ್ಷಾ ಕೇಂದ್ರಗಳಿದ್ದು, 978 ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಈ ಪೈಕಿ 177 ಅಭ್ಯರ್ಥಿಗಳು ಪರೀಕ್ಷೆಗೆ ಗೈರುಹಾಜರಾಗಿದ್ದರು. 801 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು…

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend