ಮಹನೀಯರ ತತ್ವಾದರ್ಶಗಳನ್ನು ಪಾಲಿಸಬೇಕು; ಪ್ರಶಾಂತ್ ಮೂಲೆ…!!!

Listen to this article

ಮಹನೀಯರ ತತ್ವಾದರ್ಶಗಳನ್ನು ಪಾಲಿಸಬೇಕು; ಪ್ರಶಾಂತ್ ಮೂಲೆ

ಜೀವನದಲ್ಲಿ ಸಾಧನೆಯ ಶಿಖರವೇರಲು ಪ್ರತಿಯೊಬ್ಬರೂ ಸಹ ಮಹನೀಯರ ತತ್ವಾದರ್ಶಗಳನ್ನು ಪಾಲಿಸಬೇಕು ಎಂದು ಜಿಂದಾಲ್ ಆದರ್ಶ ವಿದ್ಯಾಲಯದ ಪ್ರಾಂಶುಪಾಲರಾದ ಪ್ರಶಾಂತ್ ಮೂಲೆ ಅವರು ಹೇಳಿದರು.

ತೋರಣಗಲ್ಲಿನ ಜಿಂದಾಲ್ ಆದರ್ಶ ವಿದ್ಯಾಲಯ ಶಾಲೆ ವತಿಯಿಂದ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯ ಜಯಂತಿ ಅಂಗವಾಗಿ ಬುಧವಾರ ಜಿಂದಾಲ್ ಆದರ್ಶ ವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಗಾಂಧಿ ಜಯಂತಿ ನಿಮಿತ್ತವಾಗಿ ರಾಷ್ಟ್ರಾದ್ಯಂತ ಸ್ವಚ್ಛತಾ ಸೇವಾ ಘೋಷವಾಕ್ಯದೊಂದಿಗೆ ಸ್ವಭಾವ-ಸ್ವಚ್ಛತಾ ಸಂಸ್ಕಾರ-ಸ್ವಚ್ಛತಾ ಅಭಿಯಾನ ಹಮ್ಮಿಕೊಂಡಿದ್ದು, ಶಿಕ್ಷಕರೂ, ವಿದ್ಯಾರ್ಥಿಗಳೂ ಸೇರಿದಂತೆ ಸಾರ್ವಜನಿಕರು ತಮ್ಮ ಸುತ್ತ ಮುತ್ತಲಿನ ಪರಿಸರದಲ್ಲಿ ಶುಚಿತ್ವ ಕಾಪಾಡಿಕೊಳ್ಳುವುದು ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು.


ಈ ವೇಳೆ ಜಿಂದಾಲ್ ಆದರ್ಶ ವಿದ್ಯಾಲಯದ 210ಕ್ಕೂ ಅಧಿಕ ಶಿಕ್ಷಕರು ಸ್ವಚ್ಛತಾ ಆಂದೋಲನದಲ್ಲಿ ಪಾಲ್ಗೊಂಡು, ಗ್ರಾಮದ ಶಂಕರಗುಡ್ಡ ಪ್ರದೇಶದಲ್ಲಿರುವ ಮನೆಗಳಿಗೆ ತೆರಳಿ ಜನಸಾಮಾನ್ಯರಿಗೆ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಿ, ಮನೆಗಳಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಹೇಗೆ ಸ್ವಚ್ಛತೆಯನ್ನು ಕಾಪಾಡಬೇಕು ಎಂದು ಮನವರಿಕೆ ಮಾಡಿಕೊಟ್ಟರು. ತದನಂತರ ಮನೆಗಳಲ್ಲಿರುವ ನಿರುಪಯುಕ್ತ ಪ್ಲಾಸ್ಟಿಕ್ ತ್ಯಾಜ್ಯವನ್ನು ಚೀಲಗಳಲ್ಲಿ ಸಂಗ್ರಹಿಸಿ ಕಸ ವಿಲೇವಾರಿ ಮಾಡಲಾಯಿತು.
ಸ್ವಚ್ಛತಾ ಕಾರ್ಯಕ್ರಮದಲ್ಲಿ ವಿವಿಧ ಘೋಷಣೆಗಳುಳ್ಳ ಫಲಕಗಳನ್ನು ಹಿಡಿದು ಜನಸಾಮಾನ್ಯರಿಗೆ ಸ್ವಚ್ಛತೆಯ ಪ್ರಾಮುಖ್ಯತೆ ಸಾರಿದ್ದು ವಿಶೇಷವಾಗಿತ್ತು.

ಈ ಸಂದರ್ಭದಲ್ಲಿ ಜಿಂದಾಲ್ ಆದರ್ಶ ವಿದ್ಯಾಲಯದ ಮುಖ್ಯೋಪಾಧ್ಯಾಯನಿ ಭಾಗ್ಯವತಿ ಗಾಜುಲ ಸೇರಿದಂತೆ
ಜಿಂದಾಲ್ ಆದರ್ಶ ವಿದ್ಯಾಲಯದ ಸಂಯೋಜಕರು, ಸಫಲ್ ಸಮಿತಿ ಸದಸ್ಯರು, ಶಿಕ್ಷಕರೂ, ಹಾಗೂ ಸಿಬ್ಬಂದಿ ವರ್ಗ ಮತ್ತು ಇತರರು ಭಾಗವಹಿಸಿದ್ದರು..

ವರದಿ. ಕಾಶೆಪ್ಪ ಸಂಡೂರು ಗ್ರಾಮಾಂತರ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend