ದೇಶ ಅಭಿವೃದ್ಧಿ ಹೊಂದಲು ಸ್ವಚ್ಚತೆಯಿಂದ ಮಾತ್ರ ಸಾಧ್ಯ: ಸಚಿವ ಪ್ರಹ್ಲಾದ್ ಜೋಶಿ…!!!

Listen to this article

ದೇಶ ಅಭಿವೃದ್ಧಿ ಹೊಂದಲು ಸ್ವಚ್ಚತೆಯಿಂದ ಮಾತ್ರ ಸಾಧ್ಯ: ಸಚಿವ ಪ್ರಹ್ಲಾದ್ ಜೋಶಿ

ಬೆಂಗಳೂರು : ಗಾಂಧೀಜಿಯವರು ಸ್ವಚ್ಚತೆಗೆ ಮೊದಲ ಆದ್ಯತೆ ನೀಡುತ್ತಿದ್ದರು, ನಮ್ಮ ಸುತ್ತಮುತ್ತಲಿನ ಪರಿಸರವನ್ನು ಶುದ್ದವಾಗಿಹಿರಿಸಿದ್ದಲ್ಲಿ ಅನೇಕ ರೋಗಗಳಿಂದ ದೂರವಿರಬಹುದು, ಸ್ವಚ್ಚತೆಯಿಂದ ಆರೋಗ್ಯ ಲಭಿಸುತ್ತದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ., ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಹ್ಲಾದ್ ಜೋಶಿ ರವರು ಹೇಳಿದರು.

ಇಂದು ನಗರದ ಯಲಹಂಕದ ಸಿಂಗನಾಯಕನಹಳ್ಳಿ ಗ್ರಾಮ ಪಂಚಾಯತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪ್ರೌಢಶಾಲಾ ಆವರಣದಲ್ಲಿ ಭಾರತ ಸರ್ಕಾರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲ ಶಕ್ತಿ ಸಚಿವಾಲಯ., ಕರ್ನಾಟಕ ಸರ್ಕಾರ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಿಲ್ಲಾ ಪಂಚಾಯಿತಿ, ಬೆಂಗಳೂರು ನಗರ ಜಿಲ್ಲೆ, ಯಲಹಂಕ ತಾಲ್ಲೂಕು ಪಂಚಾಯಿತಿ ಹಾಗೂ ಸಿಂಗನಾಯಕನಹಳ್ಳಿ ಗ್ರಾಮ ಪಂಚಾಯಿತಿ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ “ಸ್ವಚ್ಚತೆಯೇ ಸೇವೆ 2024”ರ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಟಾರ್ಚನೆ ಮಾಡಿ, ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ಬಾರಿ ಗಾಂಧಿ ಜಯಂತಿಯ ಸಂದರ್ಭದಲ್ಲಿ ಭಾರತ ಸರ್ಕಾರವು ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ ನೀಡಿದೆ.

ಭಾರತ ದೇಶವು ಜಗತ್ತಿನ ಐದನೇ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ, ಸ್ವಲ್ಪದಿನಗಳಿಂದ ಮೂರನೇ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮವುದು. ಭಾರತ ಆರೋಗ್ಯಯುತ ದೇಶವಾದಾಗ ಮಾತ್ರ ಅಭಿವೃದ್ಧಿ ಹೊಂದುವುದು ಸಾಧ್ಯ ಎಂದು ಹೇಳಿದರು.

ಈ ದೇಶದ ಆಸ್ತಿ ಮಕ್ಕಳು, ಅವರನ್ನು ಮೊಬೈಲ್ ಮುಟ್ಟದಂತೆ ನೋಡಿಕೊಳ್ಳಿ ಏಕೆಂದರೆ ಬ್ರೇನ್ ಸೆಲ್ ಹಾಳಾಗುತ್ತದೆ ಇದರಿಂದ ಮಕ್ಕಳು ಅನೇಕ ತೊಂದರೆ ಎದುರಿಸಬೇಕಾಗುತ್ತದೆ. ಮಕ್ಕಳಿಗೆ ಓದಿನಲ್ಲಿ ಆಸಕ್ತಿ ಮೂಡಿಸುವಂತೆ ಮಾಡಿ ಎಂದು ಪಾಲಕರಿಗೆ ಕಿವಿ ಮಾತು ಹೇಳಿದರು.

ಯಲಹಂಕ ವಿಧಾನಸಭಾ ಕ್ರೇತ್ರದ ಶಾಸರಾದ ಎಸ್ ಆರ್ ವಿಶ್ವನಾಥ ಅವರು ಮಾತನಾಡಿ, ಕೇಂದ್ರ ಸಚಿವರು ಗ್ರಾಮಕ್ಕೆ ಆಗಮಿಸಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಿ ಸಸಿ ನೆಟ್ಟಿರುವುದು ಸಂತಸದ ವಿಷಯ ಮತ್ತು ಸ್ವಚ್ಛತೆ ಬಗ್ಗೆ ಸ್ವ-ಅರಿವು ಮೂಡಿದಾಗ ವಾತಾವರಣ ಶುಚಿಯಾಗಿರುತ್ತದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಜಲ ಜೀವನ್ ಮಿಷನ್ ಮನೆ ಮನೆಗೆ ಗಂಗೆ ಎಂಬ ಸ್ಟಾಲ್ ಉದ್ಘಾಟಿಸಿ, ವಿಶೇಷ ಗ್ರಾಮ ಸಭೆ ಮಾಡಿ ಶಾಲಾ ಆವರಣದ ಸುತ್ತ ಮುತ್ತಲಿನ ಪ್ರದೇಶದಲ್ಲಿ ಹಾಗೂ ರಸ್ತೆ ಬದಿಗಳಲ್ಲಿ ಸ್ವಚ್ಚತಾ ಹೀ ಸೇವಾ ಅಭಿಯಾನ ಕಾರ್ಯಕ್ರಮದಲ್ಲಿ ಸಸಿಗಳನ್ನು ನೆಡಲಾಯಿತು.

ಈ ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕೆ.ಎ.ದಯಾನಂದ, ಬೆಂಗಳೂರು ನಗರ ಅಪರ ಜಿಲ್ಲಾಧಿಕಾರಿಗಳಾದ ಡಾ.ಜಗದೀಶ್ ನಾಯಕ್, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ಎಸ್ ಲತಾ ಕುಮಾರಿ., ಯಲಹಂಕ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮಧು ಎಲ್, ಯಲಹಂಕ ತಾಲ್ಲೂಕು ತಹಶಿಲ್ದಾರರಾದ ಶ್ರೇಯಸ್, ಸಿಂಗನಾಯಕನಹಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು…

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend