ಕೂಡ್ಲಿಗಿ ತಾಲೂಕಿನ ಗುಂಡಿನಹೊಳೆ ಪ್ರದೇಶದಲ್ಲಿ ಕೃಷಿ ವಿಜ್ಞಾನ ಕೇಂದ್ರವನ್ನು ಸ್ಥಾಪಿಸಲು ಸರ್ಕಾರವು ಒಪ್ಪಿಗೆ…!!!

Listen to this article

ಈ ದಿನದಂದು ಮಾನ್ಯ ಶಾಸಕರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರಿನಡಿ ಕೂಡ್ಲಿಗಿ ತಾಲೂಕಿನ ಗುಂಡಿನಹೊಳೆ ಕೃಷಿ ಬೀಜೋತ್ಪದನಾ ಕೇಂದ್ರದಲ್ಲಿ ಕೃಷಿ ವಿಜ್ಞಾನ ಕೇಂದ್ರ ಆರಂಭಿಸುವ ಕುರಿತು ಪತ್ರಿಕಾಗೋಷ್ಠಿಯನ್ನು ಕರೆದರು.

ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ನಿಯಮಾನುಸಾರ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಅಡಿಯಲ್ಲಿ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಂಡಿನಹೊಳೆ ಪ್ರದೇಶದಲ್ಲಿ ಕೃಷಿ ವಿಜ್ಞಾನ ಕೇಂದ್ರವನ್ನು ಸ್ಥಾಪಿಸಲು ಸರ್ಕಾರವು ತಾತ್ವಿಕ ಒಪ್ಪಿಗೆಯನ್ನು ನೀಡಲಾಗಿದೆ ಎಂದು ತಿಳಿಸಿದರು.

ಈ ಸಮಯದಲ್ಲಿ ಮಾನ್ಯ ಶಾಸಕರು ಗುಂಡಿನಹೊಳೆ ಪ್ರದೇಶದಲ್ಲಿ ಕೃಷಿ ವಿಜ್ಞಾನ ಕೇಂದ್ರವನ್ನು ಸ್ಥಾಪಿಸಲು ತಳ ಪರಿಶೀಲನೆ ನಡೆಸಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರಿನಡಿ ಕೂಡ್ಲಿಗಿ ತಾಲೂಕಿನ ಗುಂಡಿನಹೊಳೆ ಕೃಷಿ ಬೀಜೋತ್ಪದನಾ ಕೇಂದ್ರದಲ್ಲಿ ಕೃಷಿ ವಿಜ್ಞಾನ ಕೇಂದ್ರವನ್ನು ಆರಂಭಿಸಲು ಕೃಷಿ ಆಯುಕ್ತಾಲಯಕ್ಕೆ 50. ಎಕರೆ ಬದಲಿ ಜಮೀನನ್ನು ನೀಡಬೇಕಿದ್ದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರಿನ ಅಡಿಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಯಾವುದೇ ಜಮೀನು ಲಭ್ಯವಿಲ್ಲದ ಕಾರಣ ತಮ್ಮನ್ನು ಬದಲಿ ಜಮೀನು ನೀಡುವಂತೆ ವಿಶ್ವವಿದ್ಯಾಲಯದ ವತಿಯಿಂದ ಪ್ರಸ್ತಾವನೆಯನ್ನು ಸಲ್ಲಿಸಲಾಗಿರುತ್ತದೆ ಎಂದು ಹೇಳಿದರು.

ತಮ್ಮಿಂದ ಬದಲಿ ಜಮೀನು ಮಂಜೂರು ಆದ ನಂತರ ಸದರಿ ಜಮೀನನ್ನು ಕೃಷಿ ಆಯುಕ್ತಾಲಯಕ್ಕೆ ವರ್ಗಾಯಿಸಲು ಕ್ರಮವಹಿಸಲಾಗುವುದು ಎಂದು ಕೃಷಿ ಆಯುಕ್ತರಿಗೆ ತಿಳಿಸಲಾಗಿದ್ದು ತಾವು ಕೋರಿರುವಂತೆ ನಿಯಮಾನುಸಾರ ಪರಿಶೀಲಿಸಿ ತುರ್ತಾಗಿ ಪ್ರಸ್ತಾಪಿಸಲಾಗಿರುವ ಜಮೀನನ್ನು ಕೃಷಿ ವಿಜ್ಞಾನ ಕೇಂದ್ರವನ್ನು ಸ್ಥಾಪಿಸಲು ಕೃಷಿ ಆಯುಕ್ತಾಲಯಕ್ಕೆ ಮಂಜೂರು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ N T ಶ್ರೀನಿವಾಸ್, ಕೃಷಿ ಯೋಜನಾ ನಿರ್ದೇಶಕರು N T ಶ್ರೀನಿವಾಸ್ ಅಭಿಮಾನಿ ಬಳಗದ ಎಲ್ಲ ಪದಾಧಿಕಾರಿಗಳು ಉಪಸ್ಥಿತರಿದ್ದರು…

ವರದಿ.. ವೈ. ಮಾದೇವ್ ಕೂಡ್ಲಿಗಿ ಗ್ರಾಮಾಂತರ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend