ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಕ್ಕೆ ಸತತ 3ನೇ ಬಾರಿ ಆಯ್ಕೆ – ಪಶ್ಚಿಮ ಕಾಲ್ವಿ ಪ್ರೌಢಶಾಲೆ
ಹೂವಿನ ಹಡಗಲಿ: 2024-25 ನೇ ಸಾಲಿನ ಪ್ರೌಢಶಾಲಾ ಕ್ರೀಡಾಕೂಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ತಾಲೂಕಿನ ಎಂ ಬಿ ಸಿ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದಲ್ಲಿ ಗೆಲುವು ಸಾಧಿಸಿ ಸತತ ಮೂರನೇ ಬಾರಿಗೆ ವಿಭಾಗ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.
ಶುಕ್ರವಾರ ನಡೆದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿ ಕಲಬುರ್ಗಿ ವಿಭಾಗ ಮಟ್ಟದಲ್ಲಿ ನಡೆಯುವ ಸ್ಪರ್ಧೆಗೆ ಅರ್ಹತೆ ಗಳಿಸಿದರು.
ವಿದ್ಯಾರ್ಥಿಗಳ ಸಾಧನೆಗೆ
ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ವಿ ಪೂಜಾರ ಕ್ಷೇತ್ರ ಸಮನ್ವಯಾಧಿಕಾರಿ ಎ ಕೋಟೆಪ್ಪ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿ ಹನುಮಂತಪ್ಪ ತಾಲೂಕು ದೈಹಿಕ ಅಧೀಕ್ಷಕರಾದ ರಫಿ ಅಹಮದ್ ಖವಾಸ್ ಮುಖ್ಯ ಗುರುಗಳಾದ ಎಂ ಪರುಶುರಾಮ ದೈಹಿಕ ಶಿಕ್ಷಕರಾದ ಜಗದೀಶ್ ಬಳ್ಳಾರಿ,
ತಾಲೂಕು ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಜಿ ಎಂ ಕಾಂತೇಶ್, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಂ ಶಿವಲಿಂಗಪ್ಪ, ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಪಿ ಕೆ ಪಾಟೀಲ್, ಬಿ ಶಿವಾನಂದಪ್ಪ, ಶಿಕ್ಷಕರಾದ ಸತೀಶ್, ಕೊಟ್ರೇಶ್ ಹೊಂಬಾಳೆ, ಶಿವಯೋಗಿ, ಇತರರು ಅಭಿನಂದಿಸಿದ್ದಾರೆ…
ವರದಿ ಮ್ಯಾಗೇರಿ ಸಂತೋಷ ಹೂವಿನಹಡಗಲಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030