ತರುಣ ಸಂಘದ ಶೈಕ್ಷಣಿಕ ಸೇವೆ ಅನನ್ಯ – ಎಸ್ ಎಸ್ ಪಾಟೀಲ್…!!!

Listen to this article

ತರುಣ ಸಂಘದ ಶೈಕ್ಷಣಿಕ ಸೇವೆ ಅನನ್ಯ – ಎಸ್ ಎಸ್ ಪಾಟೀಲ್

ಹೂವಿನ ಹಡಗಲಿ: ತರುಣ ಸಂಘದ ಶೈಕ್ಷಣಿಕ ಸೇವೆ ಅನನ್ಯ ಎಂದು ಜಿ ಬಿ ಆರ್ ಕಾಲೇಜು ಪ್ರಾಂಶುಪಾಲ ಎಸ್ ಎಸ್ ಪಾಟೀಲ್ ಹೇಳಿದರು.

ಪಟ್ಟಣದ ಎಸ್ ಆರ್ ಎಂ ಪಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ತರುಣ ಸಂಘದ ವತಿಯಿಂದ ಆಯೋಜಿಸಿದ್ದ ಪಿಯುಸಿ ಪದವಿ ತರಗತಿಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ತರುಣ ಸಂಘದ ವತಿಯಿಂದ ಪ್ರತಿ ವರ್ಷ ಬಡ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳಿಗೆ
ಶೈಕ್ಷಣಿಕ ನೆರವು ನೀಡುವ ಕೆಲಸ ನಿರಂತರವಾಗಿ ಮಾಡುತ್ತಿದ್ದಾರೆ.
ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಂಡು ಮುಂದಿನ ದಿನಗಳಲ್ಲಿ ಹೆಚ್ಚಿನ ಸಾಧನೆ ಮಾಡಿರಿ ಎಂದು ಹೇಳಿದರು.

ಎಸ್ ಆರ್ ಎಂ ಪಿ ಕಾಲೇಜಿನ ಪ್ರಾಂಶುಪಾಲ ವಿಜಯಕುಮಾರ್ ಮಾತನಾಡಿ ಸ್ಪರ್ಧಾತ್ಮಕ ಯುಗದಲ್ಲಿ ಅಧ್ಯಯನ ಬಹಳ ಮುಖ್ಯ ಎಂದು ತಿಳಿಸಿದರು.

ರಂಗಭಾರತಿ ಕಾರ್ಯಾಧ್ಯಕ್ಷೆ ಸುಮಾ ವಿಜಯ್ ಅಧ್ಯಕ್ಷತೆ ವಹಿಸಿದ್ದರು.
ಪ್ರಾಚಾರ್ಯರಾದ ಕೋರಿ ಹಾಲೇಶ್ ಎ ಕೊಟ್ರಗೌಡ ಮಾತನಾಡಿದರು. ಗವಿಮಠದ ಡಾ ಹಿರಿಶಾಂತವೀರ ಮಹಾಸ್ವಾಮಿಗಳು ಸಾನಿಧ್ಯ ವಹಿಸಿದ್ದರು.
ತರುಣ ಸಂಘದ ಬಸವಲಿಂಗ ಸ್ವಾಮಿ, ಹಣ್ಣಿ ಕೈಲಾಸನಾಥ, ಹುಚ್ಚಿ ಉಮಾಪತಿ, ಸಂಘದ ಅಧ್ಯಕ್ಷ ಅಟವಾಳಗಿ ಕೊಟ್ರೇಶ್
ಗುರುವಿನ ಪ್ರಕಾಶ್, ಟಿ ವೆಂಕಟೇಶ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ ಪಿ ಎಂ ಅಶೋಕ್, ಮಂಜುಳ ಇತರರು ಉಪಸ್ಥಿತರಿದ್ದರು.

ಕಳೆದ ಶೈಕ್ಷಣಿಕ ವರ್ಷದಲ್ಲಿ ಅತಿ ಹೆಚ್ಚು ಅಂಕ ಪಡೆದ ತಾಲೂಕಿನ ಪಿಯುಸಿ ಪದವಿ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು..


ವರದಿ..ಮ್ಯಾಗೇರಿ ಸಂತೋಷ ಹೂವಿನಹಡಗಲಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend