ರಕ್ತದಾನ ಪುಣ್ಯದ ಕಾರ್ಯ, ಡಿಹೆಚ್‌ಓ ಡಾ.ಯಲ್ಲಾ ರಮೇಶಬಾಬು…!!!

Listen to this article

ರಕ್ತದಾನ ಪುಣ್ಯದ ಕಾರ್ಯ: ಡಿಹೆಚ್‌ಓ ಡಾ.ಯಲ್ಲಾ ರಮೇಶಬಾಬು

ಬಳ್ಳಾರಿ:ದೇವರು ನೀಡಿದ ಅದ್ಭುತ ಕೊಡುಗೆಯಂದರೆ ಒಬ್ಬರ ರಕ್ತವನ್ನು ಇನ್ನೊಬ್ಬರಿಗೆ ದೇಹದಲ್ಲಿ ಸೇರಿಸುವುದು, ಇಂತಹ ಪುಣ್ಯದ ಕಾರ್ಯ ಮಾಡುವ ಮನಸ್ಸು ಪ್ರತಿಯೊಬ್ಬರಿಗೂ ಬರಲಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶಬಾಬು ಅವರು ತಿಳಿಸಿದರು.


ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಹಾಗೂ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ಪ್ರಯುಕ್ತ ಭಾನುವಾರ ಏರ್ಪಡಿಸಿದ್ದ ರಕ್ತದಾನಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಪ್ರತಿದಿನ ಅಪಘಾತಗಳಿಂದ ಗಾಯಗೊಂಡವರಿಗೆ ಹಾಗೂ ರಕ್ತಹೀನತೆಯಿಂದ ಬಳಲುವ ಗರ್ಭಿಣಿಯರಿಗೆ, ಹೆರಿಗೆ ಸಂದರ್ಭದಲ್ಲಿ ಗರ್ಭಿಣಿಯರಿಗೆ ಮತ್ತು ಥಲಸೀಮಿಯಾ ದಂತ ಕಾಯಿಲೆಯಿಂದ ಬಳಲುತ್ತಿರುವವರಿಗೆ ನಿರಂತರವಾಗಿ ರಕ್ತದ ಅವಶ್ಯಕತೆ ಇದ್ದು, ಈ ಹಿನ್ನಲೆಯಲ್ಲಿ ನಮ್ಮ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಗೆ ನಿರಂತರವಾಗಿ ಸಹಕಾರಿಯಾಗುವ ಅಂಶದ ಹಿನ್ನೆಲೆಯಲ್ಲಿ 18 ವರ್ಷ ತುಂಬಿದ ಆರೋಗ್ಯವಂತ ಪುರುಷರು ಮೂರು ತಿಂಗಳಿಗೊಮ್ಮೆ, ಮಹಿಳೆ ನಾಲ್ಕು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದಾಗಿದೆ ಎಂದು ತಿಳಿಸಿದರು.
ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಇಂದ್ರಾಣಿ.ವಿ ಅವರು ಮಾತನಾಡಿ, ಯಾವುದೆ ಬೇಧ-ಭಾವ, ಸಂಕೋಚಗಳಿಲ್ಲದೆ, ಜಾತಿ ಧರ್ಮವನ್ನು ಮೀರಿ ಬದುಕಿರುವಾಗ ದಾನ ಮಾಡಬಹುದಾದ ವಸ್ತು ರಕ್ತವಾಗಿದ್ದು, 18 ವರ್ಷ ಮೇಲ್ಪಟ್ಟ ಎಲ್ಲ ಪುರುಷ ಮತ್ತು ಮಹಿಳೆ ರಕ್ತದಾನ ಮಾಡುವ ಮೂಲಕ ಜಿಲ್ಲೆಯಲ್ಲಿ ರಕ್ತದ ಕೊರತೆ ನೀಗಿಸಿ ಜೀವ ಉಳಿಸುವ ಕಾರ್ಯಕ್ಕೆ ಕೈಜೋಡಿಸುವಂತೆ ವಿನಂತಿಸಿದರು.


ದಾನಿಗಳಿಗೆ ಸನ್ಮಾನ:
ಇದೇ ಸಂದರ್ಭದಲ್ಲಿ 25 ಹೆಚ್ಚು ಬಾರಿ ರಕ್ತದಾನ ಮಾಡಿದ ಮಹನಿಯರಿಗೆ ಸನ್ಮಾನಿಸಲಾಯಿತು.
ಓಂಪ್ರಕಾಶ-100 ಬಾರಿ, ಮಂಜುನಾಥ.ಬಿ-50 ಬಾರಿ, ಜೆ-ನಿತ್ಯಾನಂದ-31 ಬಾರಿ, ಪುರುಷೋತ್ತಮ.ಎಮ್-30 ಬಾರಿ, ರವಿ ಚೆಳ್ಳಗುರ್ಕಿ-29 ಬಾರಿ, ಬಿ.ಆಶೀಶ್-25 ಬಾರಿ, ನಾಗರಾಜ್-25 ಬಾರಿ.
ಈ ಸಂದರ್ಭದಲ್ಲಿ ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ.ವೀರೇಂದ್ರಕುಮಾರ, ಪೇಥಾಲಜಿಸ್ಟ್ ಡಾ.ಉದಯಶಂಕರ, ಜಿಲ್ಲಾ ಡ್ಯಾಪ್ಕೂö್ಯ ಮೇಲ್ವಿಚಾರಕ ಗಿರೀಶ್, ವಿರುಪಾಕ್ಷಪ್ಪ, ಹೊನ್ನುರಪ್ಪ, ಶಿವರಾಮ್, ಮಂಜುನಾಥ ಹಾಗೂ ಐಸಿಟಿಸಿ ಸಿಬ್ಬಂದಿಯವರು ಸೇರಿದಂತೆ ವಿಮುಕ್ತಿ ಸೌಖ್ಯಬೆಳಕು, ನಿತ್ಯಜೀವನ ಸಂಸ್ಥೆಗಳ ಕಾರ್ಯಕರ್ತೆಯರು ಉಪಸ್ಥಿತರಿದ್ದರು…

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend