ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಜಿಲ್ಲೆಯ ಜಾನಪದ ಕಲಾವಿದ ಇಮಾಮಸಾಬ ಆಯ್ಕೆ; ಜಿಲ್ಲಾಡಳಿತದಿಂದ ಅಭಿನಂದನೆ
ಧಾರವಾಡ : ನವೆಂಬರ್ 1, ಆಚರಿಸುತ್ತಿರುವ 69ನೇ ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ರಾಜ್ಯ ಸರ್ಕಾರದಿಂದ ಕೊಡಮಾಡುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಜಿಲ್ಲೆಯ ಜಾನಪದ ಕಲಾವಿದ ಮತ್ತು ಜನಪದ ಹಾಡುಗಾರ ಇಮಾಮಸಾಬ ಎಮ್. ವಲ್ಲೆಪನವರ ಆಯ್ಕೆಯಾಗಿದ್ದಾರೆ.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ಇಂದು ಸಂಜೆ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರ ಪಟ್ಟಿಯನ್ನು ಪ್ರಕಟಿಸಿದ್ದು ಜಿಲ್ಲೆಯ ಜಾನಪದ ಕಲಾವಿದ ಇಮಾಮಸಾಬ ವಲ್ಲೆಪನವರ ಆಯ್ಕೆಯಾಗಿದ್ದಾರೆ. ಮೂಲತಃ ಜಿಲ್ಲೆಯ ನವಲಗುಂದ ತಾಲೂಕಿನ ನಾಗನೂರ ಗ್ರಾಮದವರಾದ ಇಮಾಮಸಾಬ ಅವರು ಸದ್ಯ ಹುಬ್ಬಳ್ಳಿ ವಾಸಿಗಳಾಗಿದ್ದಾರೆ.
ಜಾನಪದ ಕಲೆ, ಹಾಡು ಮತ್ತು ಜಾನಪದ ಕಲಾತಂಡಗಳನ್ನು ಕಟ್ಟಿಕೊಂಡು ನಾಡಿನಾದ್ಯಂತ ಜಾನಪದ ಕಲೆಯನ್ನು ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕದ ಜಾನಪದ ಕಲೆಯನ್ನು ಪಸರಿಸಿ ಪ್ರಚುರ ಪಡಿಸಿದ್ದಾರೆ. ಮತ್ತು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಜಾನಪದ ತಜ್ಞರಾಗಿ ವಿಶೇಷ ಉಪನ್ಯಾಸಗಳನ್ನು ವಿದ್ಯಾರ್ಥಿಗಳಿಗೆ ನೀಡಿದ್ದಾರೆ.
ಧಾರವಾಡ ಜಿಲ್ಲೆಯಿಂದ ಪ್ರಶಸ್ತಿ ಪುರಸ್ಕøತರಾಗಿರುವ ಇಮಾಮಸಾಬ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹಾಗೂ ಜಿಲ್ಲಾಧಿಕಾರಿ ದಿವ್ಯ ಪ್ರಭು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲೆಯ ಜಾನಪದ ತಜ್ಞರು ಅಭಿನಂದಿಸಿದ್ದಾರೆ…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030