ಹಲ್ಮಡಿ ಶಾಸನದ ಪ್ರತಿಕೃತಿಯ ಅನಾವರಣ…!!!

Listen to this article

ಹಲ್ಮಡಿ ಶಾಸನದ ಪ್ರತಿಕೃತಿಯ ಅನಾವರಣ
ಚಿತ್ರದುರ್ಗ:ಕರ್ನಾಟಕ ಸಂಭ್ರಮ-50, ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕನ್ನಡ ಅಭಿಯಾನದಡಿ, ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹಲ್ಮಡಿ ಶಾಸನದ ಪ್ರತಿಕೃತಿಯನ್ನು ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅನಾವರಣಗೊಳಿಸಿದರು.
ಕನ್ನಡದ ಮೊದಲ ಶಿಲಾ ಶಾಸನ
ಬೇಲೂರು ತಾಲೂಕಿನ ಹಲ್ಮಿಡಿಯಲ್ಲಿ 1936ರಲ್ಲಿ ಪತ್ತೆಯಾದ ಶಾಸನವನ್ನು ಕನ್ನಡ ಲಿಪಿಯಲ್ಲಿ ಲಭ್ಯವಾದ ಮೊಟ್ಟ ಮೊದಲ ಶಾಸನವೆಂದು ಪರಿಗಣಿಸಲಾಗಿದೆ. 16 ಸಾಲುಗಳ ಬರಹ ಇದರಲ್ಲಿತ್ತು. ಇದು ಕ್ರಿ.ಶಕ 450ರ ಸುಮಾರಿನದ್ದು ಎಂದು ಅಂದಾಜಿಸಲಾಗಿದೆ. ಇದರ ಬಗ್ಗೆ ಸಾಕಷ್ಟು ಅಧ್ಯಯನ-ಅವಲೋಕನಗಳು ನಡೆದಿದೆ. ಹೀಗಾಗಿ ಈ ಶಿಲಾ ಶಾಸನದ ಮಹತ್ವವನ್ನು ಶಾಶ್ವತವಾಗಿ ಜನರ ನೆನಪಿನಲ್ಲಿ ಉಳಿಯುವಂತೆ ಮಾಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಪ್ರತಿಕೃತಿ ಸ್ವರೂಪದಲ್ಲಿ ಇದನ್ನು ಕನ್ನಡ ಸಂಸ್ಕೃತಿ ಇಲಾಖೆಯಿಂದ ಸ್ಥಾಪಿಸಲಾಗಿದೆ.
ಈ ವೇಳೆ ಆದಿಜಾಂಬವ ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷ ಜಿ.ಎಸ್.ಮಂಜುನಾಥ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ. ಸಿಇಓ ಎಸ್.ಜೆ.ಸೋಮಶೇಖರ್, ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಧಿಕಾರಿ ಎಂ.ಕಾರ್ತಿಕ್, ಜಿಲ್ಲಾ ಕಸಾಪ ಅಧ್ಯಕ್ಷ ಶಿವಸ್ವಾಮಿ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend