ಕಾನಹೋಸಹಳ್ಳಿ ವಿಶ್ವ ತಂಬಾಕು ರಹಿತ ದಿನಾಚರಣೆ…!!!

Listen to this article

ವಿಶ್ವ ತಂಬಾಕು ರಹಿತ ದಿನಾಚರಣೆ
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಕಾನಹೊಸಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯ ಆವರಣದಲ್ಲಿ ಕಾನಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ಆಚರಿಸಲಾಯಿತು.
ವಿಶ್ವ ತಂಬಾಕು ರಹಿತ ದಿನಾಚರಣೆ ಯನ್ನು ಉದ್ದೇಶಿಸಿ ಕಾನಹೊಸಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಎಚ್ ನಾಗರತ್ನಮ್ಮನವರ ಮಾತನಾಡಿ ತಂಬಾಕು ಸೇವನೆಯಿಂದ ದೇಹದ ಪ್ರತಿಯೊಂದು ಜೀವಕೋಶದ ಮೇಲೆ ಪರಿಣಾಮ ಬೀರುತ್ತದೆ.ಪ್ರಮುಖವಾಗಿ ಹೃದಯ ಸಂಬಂಧಿ ಶ್ವಾಸಕೋಶ ತೊಂದರೆ ಹಾಗೂ ಕ್ಯಾನ್ಸರ್ ಕಾಯಿಲೆಗಳಿಗೆ ತುತ್ತಾಗುತ್ತಾರೆ. ಬೀಡಿ ಸಿಗರೇಟ್ ಗುಟ್ಕಾ ನಸ್ಯ ಇವನ್ನೆಲ್ಲ ಉಪಯೋಗ ಮಾಡಿದರೆ ದೇಹಕ್ಕೆ ಸಂಬಂಧಿಸಿದಂತೆ ನಾನಾ ತರದ ಕ್ಯಾನ್ಸರ್ ಕಾಯಿಲೆಗಳು ಉಲ್ಬಣಗೊಳ್ಳುತ್ತವೆ. ಶಾಲೆ-ಕಾಲೇಜುಗಳಲ್ಲಿ ಮಕ್ಕಳು ವಿಮಲ್ ಗುಟ್ಕಾ. ಪಾನ್ ಪರಾಗ್. ಮುಂತಾದವುಗಳನ್ನು ಉಪಯೋಗಿಸಬಾರದು ಇವುಗಳ ಉಪಯೋಗದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ನಿಮ್ಮ ಶಿಕ್ಷಕರು ಹಾಗೂ ವಿಜ್ಞಾನ ಪುಸ್ತಕದಲ್ಲಿ ಓದಿದ್ದೀರಿ ದಯವಿಟ್ಟು ಯಾರೂ ಇಂತಹ ಚಟಗಳಿಗೆ ಬಲಿಯಾಗಬೇಡಿ. ಸಾರ್ವಜನಿಕ ಸ್ಥಳಗಳಲ್ಲಿ ಬೀಡಿ ಸಿಗರೇಟ್ ಸೇವನೆ ಮಾಡಿ ಬಿಟ್ಟ ಹೊಗೆಯನ್ನು ಬೇರೆಯವರು ಸೇವಿಸಿದರು ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಹೆಚ್ಚು.ಸಾರ್ವಜನಿಕ ಸ್ಥಳಗಳಲ್ಲಿಯಾರು ಬಿಡಿ ಸಿಗರೇಟ್ ಸೇದಬಾರದು.ಸರಕಾರ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಿದವರ ಬಗ್ಗೆ ದಂಡ ಅಥವಾ ಕಾನೂನು ರೀತಿ ಶಿಕ್ಷೆ ವಿಧಿಸಲುಕಾನೂನು ಮಾಡಿದೆ. ಪ್ರತಿಯೊಬ್ಬರೂ ತಂಬಾಕು ಸೇವನೆ ಮಾಡುವುದು. ಗುಟ್ಕಾ ವಿಮಲ್. ಇಂತಹ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ವಸ್ತುಗಳನ್ನು ಯಾರು ಸೇವನೆ ಮಾಡಬೇಡಿ ಎಂದು ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಟ್ಟರು.
ಈ ಸಂದರ್ಭದಲ್ಲಿ, ಎಎಸ್ಐ.ದುರುಗಪ್ಪ ನವರು,ಪೋಲಿಸ್ ವಿಜಯ್ ಕುಮಾರ್,ಹಾಲೇಶ್, ಸೇರಿದಂತೆ ಶಾಲಾ ಶಿಕ್ಷಕರು ಮಕ್ಕಳು ಉಪಸ್ಥಿತರಿದ್ದರು…

 

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend