ಅಜೀಂ ಪ್ರೇಮ್ ಜಿ ಫೌಂಡೇಶನ್ ಬೆಂಗಳೂರು ಅವರ ಸಹ ಭಾಗಿತ್ವದಲ್ಲಿ ಶಾಲಾ ಮಕ್ಕಳ ಪೌಷ್ಟಿಕತೆ ವೃದ್ದಿಸಲು 6 ದಿನಗಳ ಪೂರಕ ಪೌಷ್ಟಿಕ ಆಹಾರ ವಿತರಣೆ…!!!

Listen to this article

ಅಜೀಂ ಪ್ರೇಮ್ ಜಿ ಫೌಂಡೇಶನ್ ಬೆಂಗಳೂರು ಅವರ ಸಹ ಭಾಗಿತ್ವದಲ್ಲಿ ಶಾಲಾ ಮಕ್ಕಳ ಪೌಷ್ಟಿಕತೆ ವೃದ್ದಿಸಲು 6 ದಿನಗಳ ಪೂರಕ ಪೌಷ್ಟಿಕ ಆಹಾರ ವಿತರಣೆ.

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಪಟ್ಟಣದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಧಾನ ಮಂತ್ರಿ ಪೋಷನ್ ಶಕ್ತಿ ನಿರ್ಮಾಣ ಮಧ್ಯಾಹ್ನದ ಉಪಹಾರ ಯೋಜನೆ ಅನ್ವಯ ಅಜೀಂ ಪ್ರೇಮ್ ಜಿ ಪ್ರತಿಷ್ಠಾನ ರವರ ಪ್ರಾಯೋಜಕತ್ವದ ಪೂರಕ ಪೌಷ್ಟಿಕ ಆಹಾರ ಪೂರೈಕೆ ಅಡಿಯಲ್ಲಿ ವಾರದ ನಾಲ್ಕು ದಿನಗಳ ಕಾಲ ಮೊಟ್ಟೆ ಬಾಳೆಹಣ್ಣು ಶೇಂಗಾ ಚಿಕ್ಕಿ ವಿತರಣಾ ಕಾರ್ಯಕ್ರಮವನ್ನು ಡಿಸೆಂಬರ್ 25 ರಂದು ಸರ್ಕಾರ ದೊಂದಿಗೆ ಮೂರು ವರ್ಷಗಳ ಅವಧಿ ರೂ 1,591. ಕೋಟಿ ರೂಪಾಯಿಗಳ ವೆಚ್ಚದ ಒಪ್ಪಂದ ಮಾಡಿ ಕೊಂಡಿದ್ದು, ಈ ಕಾರ್ಯಕ್ರಮದ 2024 -25 ನೇ. ಸಾಲಿನ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ 6 ದಿನಗಳು ಪೂರಕ ಪೌಷ್ಟಿಕ ಆಹಾರವನ್ನು ಉಚಿತವಾಗಿ ವಿತರಿಸುವ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ
ಗ್ರಾಮ ಪಂಚಾಯತಿ ಅಧ್ಯಕ್ಷರಾದ ಎ.ಸಿ.ಚೇತನ್ ಮಾತನಾಡಿ ಮೊಟ್ಟೆ ತಿನ್ನುವಂತಹ ಮಕ್ಕಳಿಗೆ ಮೊಟ್ಟೆ ಹಾಗೂ ಮೊಟ್ಟೆ ತಿನ್ನದೇ ಇರುವಂಥ ಮಕ್ಕಳಿಗೆ ಮೊಟ್ಟೆ ಬದಲಾಗಿ ಬಾಳೆಹಣ್ಣು ವಿತರಣೆ ಮಾಡುವುದ ರೊಂದಿಗೆ ಶಾಲಾ ಮಕ್ಕಳೊಂದಿಗೆ ಶಾಲೆಯಲ್ಲಿ ತಯಾರಿಸಿದ ಬಿಸಿ ಊಟವನ್ನು ಮಕ್ಕಳ ಸಾಲಿನಲ್ಲಿ ಕೂತು ಬಿಸಿಯೂಟ ಸೇವಿಸಿದರು.
ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ರತ್ನಮ್ಮ, ಅಡಿವೆಜ್ಜರ್ ನಾಗೇಶ್.ಉನ್ನತಿಕರಿಸಿದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹೊಸಹಳ್ಳಿ ಮುಖ್ಯಗುರುಗಳು ಹಾಗೂ ಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿ ವರ್ಗದವರು ಇತರರಿದ್ದರು…

ವರದಿ. ಎಂ, ಬಸವರಾಜ್, ಕಕ್ಕುಪ್ಪೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend