ಗಂಡ ಬೊಮ್ಮನಹಳ್ಳಿ ಗ್ರಾ.ಪಂ. ಅಧ್ಯಕ್ಷರಾಗಿ ಓಬಮ್ಮ ಅವಿರೋಧ ಆಯ್ಕೆ
ಕೂಡ್ಲಿಗಿ ತಾಲ್ಲೂಕಿನ. ಗಂಡಬೊಮ್ಮನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಬುದುವಾರ ನಡೆದ ಚುನಾವಣೆಯಲ್ಲಿ ಓಬಮ್ಮ ಅಧ್ಯ ಅಧ್ಯಕ್ಷ ರಾಗಿ ಅವಿರೋಧವಾಗಿ ಆಯ್ಕೆಯಾದರು.
ಹಿಂದಿನ ಅಧ್ಯಕ್ಷರ ಶ್ರೀಮತಿ ನವಲಮ್ಮ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಗೆ ಓಬಮ್ಮ ಮಾತ್ರ ನಾಮ ಪತ್ರ ಸಲ್ಲಿಸಿದ್ದರು. ಬೇರೆ ನಾಮಪತ್ರಗಳು ಸಲ್ಲಿಕೆಯಾಗದ ಕಾರಣ ತಹಶೀಲ್ದಾರ್ ರೇಣುಕಮ್ಮ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಿ ಅವಿರೋಧ ಆಯ್ಕೆ ಪ್ರಕಟಿಸಿ ಓಬಮ್ಮ. ನವರಿಗೆ ಅಧಿಕಾರ ವಹಿಸಿಕೊಟ್ಟರು.
ಉಪಾಧ್ಯಕ್ಷ ಆರ್ ಬಸವರಾಜ್ ಸೇರಿದಂತೆ 15 ಮಂದಿ ಸದಸ್ಯರು ಹಾಜರಿದ್ದರು. 2 ಸದಸ್ಯರು ಗೈರು ಹಾಜರಾಗಿದ್ದರು.
ನೂತನ ಅಧ್ಯಕ್ಷರು ಓಬಮ್ಮ ಮಾತನಾಡಿ ಮಾತನಾಡಿ, ಗಂಡ ಬೊಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ನಮ್ಮ ನಡವಲಹಳ್ಳಿ ಗ್ರಾಮ. ಇತಿಹಾಸದಲ್ಲಿ ನಮ್ಮ ಪುಟ್ಟ ಗ್ರಾಮದಿಂದ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ. ಇಲ್ಲಿಯವರೆಗೂ ಯಾರು ಆಯ್ಕೆ ಆಗಿರುವುದಿಲ್ಲ. ಆದರೆ ಇಂದು ನಾನು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆ ಆಗಿರುವುದು ಸಂತಸ ತಂದಿದೆ ನನ್ನನ್ನು ಅವಿರೋಧ ಆಯ್ಕೆಗೆ ಸಹಕರಿಸಿದ ಎಲ್ಲ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಹಳ್ಳಿಗಳಲ್ಲಿ ಸಮಸ್ಯೆಗಳ ಪರಿಹಾರಕ್ಕಾಗಿ ಶ್ರಮಿಸುತ್ತೇನೆ. ಪಕ್ಷಾತೀತ ನೆಲೆಯಲ್ಲಿ ಅಭೀವೃದ್ಧಿ ಕಾರ್ಯಗಳನ್ನು ಮಾಡಿಕೊಡುತ್ತೇನೆ…
ವರದಿ. ಶಿವಕುಮಾರ್ ಗುಡೇಕೋಟೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030