ಸೂಸುತ್ರವಾಗಿ, ಶಾಂತವಾಗಿ ಜರುಗಿದ ಕೆ.ಎ.ಎಸ್. ಪೂರ್ವಭಾವಿ ಪರೀಕ್ಷೆ; ಜಿಲ್ಲಾಧಿಕಾರಿಗಳಿಂದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ…!!!

Listen to this article

ಸೂಸುತ್ರವಾಗಿ, ಶಾಂತವಾಗಿ ಜರುಗಿದ ಕೆ.ಎ.ಎಸ್. ಪೂರ್ವಭಾವಿ ಪರೀಕ್ಷೆ;
ಜಿಲ್ಲಾಧಿಕಾರಿಗಳಿಂದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ

ಧಾರವಾಡ : ಕರ್ನಾಟಕ ಲೋಕಸೇವಾ ಆಯೋಗ ಇಂದು ನಡೆಸಿದ ಕೆ.ಎ.ಎಸ್ ಪೂರ್ವಭಾವಿ ಪರೀಕ್ಷೆಯು ಧಾರವಾಡದಲ್ಲಿ ಸೂಸುತ್ರವಾಗಿ ಮತ್ತು ಶಾಂತಿಯುತವಾಗಿ ಜರುಗಿತು.

ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ನಗರದ ವಿವಿಧ ಕಾಲೇಜುಗಳಲ್ಲಿ ಸ್ಥಾಪಿಸಿದ್ದ ಕೆ.ಎ.ಎಸ್ ಪ್ರೀಲಿಮ್ಸ್ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಪರಿಶೀಲಿಸಿದರು. ಸಿ.ಸಿ.ಟಿ.ವಿ, ಪೇಸ್ ರೀಡಿಂಗ್ ಇತ್ಯಾದಿಗಳ ಪಾಲನೆ ಕುರಿತು ನೋಡಲ್ ಅಧಿಕಾರಿ ಮತ್ತು ಪ್ರಾಚಾರ್ಯರಿಂದ ಮಾಹಿತಿ ಪಡೆದರು.

ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದ ರಾಜೀವ ಗಾಂಧಿ ಪ್ರೌಢಶಾಲೆ, ಬಾಷಲ್ ಮಿಷನ್ ಗಲ್ರ್ಸ್ ಹೈಸ್ಕೂಲ್, ಕಿಟಲ್ ಕಲಾ ಹಾಗೂ ವಿಜ್ಞಾನ ಮಹಾವಿದ್ಯಾಲಯ ಸೇರಿದಂತೆ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿದರು.

ಧಾರವಾಡ ನಗರದ ವಿವಿಧ ಕಾಲೇಜುಗಳಲ್ಲಿ ಕೆ.ಎ.ಎಸ್ ಪೂರ್ವಭಾವಿ ಪರೀಕ್ಷೆಗಾಗಿ 33 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಕೆ.ಎ.ಎಸ್ ಪೂರ್ವಭಾವಿ ಪರೀಕ್ಷೆ ಬರೆಯಲು 10,818 ಜನ ಅಭ್ಯರ್ಥಿಗಳು ಧಾರವಾಡ ಕೇಂದ್ರವನ್ನು ಆಯ್ಕೆ ಮಾಡಿಕೊಂಡಿದ್ದರು.

ಇಂದು ಬೆಳಿಗ್ಗೆ 10 ರಿಂದ 12 ಗಂಟೆವರೆಗೆ ಜರುಗಿದ ಮೊದಲ ಪೇಪರ್ ಪರೀಕ್ಷೆಗೆ 6,879 ಅಭ್ಯರ್ಥಿಗಳು ಹಾಜರಾಗಿದ್ದರು ಮತ್ತು 3,939 ಜನ ಅಭ್ಯರ್ಥಿಗಳು ಗೈರಾಗಿದ್ದರು. ಮತ್ತು ಮದ್ಯಾಹ್ನ 2 ರಿಂದ 4 ಗಂಟೆವೆರೆಗೆ ಎರಡನೆ ಪತ್ರಿಕೆ ಪರೀಕ್ಷೆಗೆ 7,062 ಅಭ್ಯರ್ಥಿಗಳು ಹಾಜರಾಗಿದ್ದರು ಮತ್ತು 3,756 ಜನ ಅಭ್ಯರ್ಥಿಗಳು ಗೈರಾಗಿದ್ದರು ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ..

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend