ಗ್ರಾಮ ಆರೋಗ್ಯ ಯೋಜನೆ ಮೂಲಕ ಗ್ರಾಮೀಣ ಜನರ ಆರೋಗ್ಯ ಸುಧಾರಣೆಗೆ ಆದ್ಯತೆ ನೀಡೋಣ: ರಾಹುಲ್ ಶರಣಪ್ಪ ಸಂಕನೂರ…!!!

Listen to this article

ಗ್ರಾಮ ಆರೋಗ್ಯ ಯೋಜನೆ ಮೂಲಕ ಗ್ರಾಮೀಣ ಜನರ ಆರೋಗ್ಯ ಸುಧಾರಣೆಗೆ ಆದ್ಯತೆ ನೀಡೋಣ: ರಾಹುಲ್ ಶರಣಪ್ಪ ಸಂಕನೂರ

ಬಳ್ಳಾರಿ:ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳ ಮೂಲಕ ಪ್ರತಿ ಗ್ರಾಮಗಳಲ್ಲಿ ಆರೋಗ್ಯ ತಪಾಸಣಾ ಶಿಬಿರಗಳನ್ನು ಕ್ರಮಬದ್ಧವಾಗಿ ಆಯೋಜಿಸುವ ಮೂಲಕ ಜನಸಾಮಾನ್ಯರ ಸುಸ್ಥಿರ ಆರೋಗ್ಯ ಸುಧಾರಣಗೆ ಆದ್ಯತೆ ನೀಡೋಣ ಎಂದು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ತಿಳಿಸಿದರು.
ಜಿಲ್ಲಾಡಳಿತ ಹಾಗೂ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ ರಾಜ್ ಇಲಾಖೆಯಡಿ ಮೈಸೂರಿನ ಅಬ್ದುಲ್ ನಜೀರಸಾಬ್ ರಾಜ್ಯ ಗ್ರಾಮೀಣಾಭಿವೃದ್ದಿ ಸಂಸ್ಥೆ ಸಂಯೋಗದೊoದಿಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಗ್ರಾಮ ಆರೋಗ್ಯ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಸಾಂಕ್ರಾಮಿಕ ರೋಗಗಳಾದ ರಕ್ತದೊತ್ತಡ, ಸಕ್ಕರೆ ಕಾಯಿಲೆ, ಕ್ಷಯರೋಗ, ಮಾನಸಿಕ ಆರೋಗ್ಯ, ಅಪೌಷ್ಟಿಕತೆ, ರಕ್ತಹೀನತೆ ಹಾಗೂ ಮುಟ್ಟಿನ ನೈರ್ಮಲ್ಯ ಮತ್ತು ಬಾಲ್ಯವಿವಾಹ ತಡೆಗಟ್ಟುವಿಕೆ ಮುಂತಾದ ಮಹತ್ವಪೂರ್ಣ ಅಂಶಗಳನ್ನು ಒಳಗೊಡಿದ್ದು, ರಾಜ್ಯ ಸರಕಾರದ ಆಶಯದಂತೆ ಸೂಕ್ತ ಆರೈಕೆ, ಚಿಕಿತ್ಸೆ ಅಗತ್ಯವಿರುವವರಿಗೆ ಮೇಲ್ಮಟ್ಟದ ಆಸ್ಪತ್ರೆಗೆ ಕಳುಹಿಸುವ ಮೂಲಕ ಆರೋಗ್ಯಯುತ ಸಮಾಜ ನಿರ್ಮಿಸಲು ಪ್ರತಿಯೊಬ್ಬರೂ ಕೈಜೋಡಿಸೋಣ ಎಂದು ಹೇಳಿದರು.


ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಂಟಿಯಾಗಿ ಸಂಬoಧಿಸಿದ ಗ್ರಾಮ ಪಂಚಾಯತ ಅಡಿಯಲ್ಲಿ ಪ್ರತಿ ಗ್ರಾಮದಲ್ಲಿ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲು ಗ್ರಾಮ ಆರೋಗ್ಯ ಪಡೆಗಳ ಸದಸ್ಯರಾದ ಪಂಚಾಯತ್ ಸದಸ್ಯರು, ಪಂಚಾಯತ್ ವ್ಯಾಪ್ತಿಯಲ್ಲಿ ಇರುವ ಇತರ ಇಲಾಖೆಯ ಸಿಬ್ಬಂದಿಯವರಿಗೆ ಸೂಕ್ತ ತರಬೇತಿಯನ್ನು ನೀಡಬೇಕು ಎಂದು ಸೂಚಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ನಾಗರಾಜ, ಮಂಜುನಾಥ್, ತರಬೇತಿ ನೀಡಿದರು.
ಈ ಸಂದರ್ಭದಲ್ಲಿ ಜಿಪಂನ ಉಪ ಕಾರ್ಯದರ್ಶಿ ಗಿರಿಜಾ ಶಂಕರ, ಜಿಪಂನ ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ, ಯೋಜನಾ ನಿರ್ದೇಶಕ ವಿನೋದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವೈ.ರಮೇಶ್ ಬಾಬು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕ ವಿಜಯ್ ಕುಮಾರ್ ಕೆ.ಹೆಚ್, ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ.ಅಬ್ದುಲ್ಲಾ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ, ಡಾ.ಇಂದ್ರಾಣಿ.ವಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ, ಡಾ.ಮರಿಯಂಬಿ.ವಿ.ಕೆ, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ, ಮನೋರೋಗ ತಜ್ಞ ಡಾ.ರೋಹನ್ ವನಗುಂದಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ ಸೇರಿದಂತೆ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಹಾಗೂ ಸಿಬ್ಬಂದಿಯವರು ಭಾಗವಹಿಸಿದ್ದರು..

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend