ಜಿಲ್ಲಾ ಮಟ್ಟದ “ಬಾಪೂಜಿ ಪ್ರಬಂಧ ಸ್ಪರ್ಧೆ”ಅಚ್ಚುಕಟ್ಟಾಗಿ ಆಯೋಜಿಸುವಂತೆ ಜಿಪಂ ಉಪಕಾರ್ಯದರ್ಶಿ ಗಿರಿಜಾ ಶಂಕರ್ ಸೂಚನೆ…!!!

Listen to this article

ಜಿಲ್ಲಾ ಮಟ್ಟದ “ಬಾಪೂಜಿ ಪ್ರಬಂಧ ಸ್ಪರ್ಧೆ”ಅಚ್ಚುಕಟ್ಟಾಗಿ ಆಯೋಜಿಸುವಂತೆ ಜಿಪಂ ಉಪಕಾರ್ಯದರ್ಶಿ ಗಿರಿಜಾ ಶಂಕರ್ ಸೂಚನೆ

ಬಳ್ಳಾರಿ,:ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಚರಿಸುತ್ತಿರುವ ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ದಿನಾಚರಣೆಯ ಅಂಗವಾಗಿ ಪ್ರೌಢಶಾಲಾ, ಕಾಲೇಜು ಹಾಗೂ ಪದವಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾಗುತ್ತಿರುವ ‘ಬಾಪೂಜಿ ಪ್ರಬಂಧ ಸ್ಪರ್ಧೆ’ಯನ್ನು ಅಚ್ಚು ಕಟ್ಟಾಗಿ ಆಯೋಜಿಸಿ, ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಪಂಚಾಯತ್‌ನ ಉಪ ಕಾರ್ಯದರ್ಶಿ ಗಿರಿಜಾ ಶಂಕರ್ ಅವರು ನಿರ್ದೇಶನ ನೀಡಿದರು.
ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ಏರ್ಪಡಿಸುವ ನಿಟ್ಟಿನಲ್ಲಿ ಜಿಪಂ ಕಚೇರಿಯ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಏರ್ಪಡಿಸಲಾಗಿರುವ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವಂತೆ ಮಾಡುವುದರ ಮೂಲಕ ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಆಯೋಜಿಸಬೇಕು. ಜಿಲ್ಲೆಯ ಪ್ರತಿಯೊಂದು ತಾಲ್ಲೂಕುಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸುವಂತಾಗಬೇಕು. ಈ ಬಗ್ಗೆ ಸಂಬAಧಪಟ್ಟ ಇಲಾಖಾ ಅಧಿಕಾರಿಗಳು ಮುತುವರ್ಜಿ ವಹಿಸಿ, ಸ್ಪರ್ಧೆಯನ್ನು ಯಶಸ್ವಿಗೊಳಿಸಬೇಕು ಎಂದರು.
ಜಿಲ್ಲೆಯಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಗೆ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಖಾಸಗಿ ಮತ್ತು ಸರ್ಕಾರಿ ಪ್ರೌಢಶಾಲೆ, ಕಾಲೇಜು ಹಂತದಲ್ಲಿಯೇ ಸ್ಪರ್ಧೆ ಏರ್ಪಡಿಸಿ, ಸ್ಪರ್ಧೆಯ ಕುರಿತು ಸಾಕಷ್ಟು ಮುಂಚಿತವಾಗಿ ವಿದ್ಯಾರ್ಥಿಗಳಿಗೆ ತಿಳಿಸಿ, ಅವರು ಸ್ಪರ್ಧೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಕ್ರಮ ವಹಿಸಬೇಕು. ಪ್ರೌಢಶಾಲಾ ವಿಭಾಗದ ಸ್ಪರ್ಧೆಯಲ್ಲಿ ಅತ್ಯುತ್ತಮ 03 ಪ್ರಬಂಧದ ಫಲಿತಾಂಶವನ್ನು ಡಿಡಿಪಿಐ, ಡಿಡಿಪಿಯು ಹಾಗೂ ಪದವಿ-ಸ್ನಾತಕೋತ್ತರ ಪದವಿ ವಿಭಾಗದ ಫಲಿತಾಂಶವನ್ನು ಸೆಪ್ಟೆಂಬರ್ 08 ರೊಳಗೆ ಜಿಲ್ಲಾ ವಾರ್ತಾಧಿಕಾರಿಗಳಿಗೆ ತಲುಪಿಸಬೇಕು ಎಂದು ತಿಳಿಸಿದರು.
ಸ್ಪರ್ಧೆಯ ನಿಬಂಧನೆಗಳನ್ನು ತಪ್ಪದೆ ಪಾಲಿಸಬೇಕು. ಪ್ರೌಢಶಾಲೆ ವಿಭಾಗ, ಪದವಿಪೂರ್ವ ವಿಭಾಗ, ಪದವಿ-ಸ್ನಾತಕೋತ್ತರ ಪದವಿ ವಿಭಾಗಕ್ಕೆ ಪ್ರತ್ಯೇಕ ಬಹುಮಾನಗಳಿರುವುದರಿಂದ, ಪದವಿಪೂರ್ವ ವಿಭಾಗ, ಪದವಿ-ಸ್ನಾತಕೋತ್ತರ ಪದವಿ ವಿಭಾಗದ ಸ್ಪರ್ಧೆಯಲ್ಲಿ ಪ್ರಬಂಧಗಳನ್ನು ಅತ್ಯಂತ ಎಚ್ಚರಿಕೆಯಿಂದ ಮೌಲ್ಯಮಾಪನ ಮಾಡಿಸಿ, ಅತ್ಯುತ್ತಮ ಪ್ರಬಂಧ ಬರೆದು ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಕ್ಕೆ ಆಯ್ಕೆಯಾದವರ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ವಿವರವುಳ್ಳ ಫಲಿತಾಂಶ ಮತ್ತು ಬಹುಮಾನಕ್ಕೆ ಆಯ್ಕೆಯಾದ ಮೂಲ ಪ್ರಬಂಧಗಳ ಪ್ರತಿಗಳನ್ನು, ಇದರ ಜೊತೆಗೆ ಜಿಲ್ಲೆಯಲ್ಲಿ ಒಟ್ಟಾರೆ ಸ್ಪರ್ಧೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳ ತಾಲ್ಲೂಕುವಾರು ಸಂಖ್ಯಾ ವಿವರವನ್ನು ಕ್ರೋಢೀಕರಿಸಿ ಜಿಲ್ಲಾ ವಾರ್ತಾಧಿಕಾರಿಗಳಿಗೆ ತಪ್ಪದೆ ತಲುಪಿಸಬೇಕು ಎಂದು ಜಿಪಂ ಉಪಕಾರ್ಯದರ್ಶಿಯವರು ಹೇಳಿದರು.
ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕರಾದ ವೇದಾವತಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಥಮ ದರ್ಜೆ ಸಹಾಯಕ ವಿ.ಸಿ.ಗುರುರಾಜ ಉಪಸ್ಥಿತರಿದ್ದರು.

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend