ವಿಶ್ವಕರ್ಮ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ…!!!

Listen to this article

ವಿಶ್ವಕರ್ಮ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ

ಜಿಲ್ಲಾಡಳಿತದಿಂದ ವಿಶ್ವಕರ್ಮ ಜಯಂತಿ ಅರ್ಥಪೂರ್ಣ ಆಚರಣೆ: ಎಡಿಸಿ ಮಹಮ್ಮದ್ ಝುಬೇರ್

ಬಳ್ಳಾರಿ:ಜಿಲ್ಲಾಡಳಿತದಿಂದ ವಿಶ್ವ ಕರ್ಮ ಜಯಂತಿಯನ್ನು ಸೆಪ್ಟೆಂಬರ್ 17 ರಂದು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಹೇಳಿದರು.
ಸೋಮವಾರದಂದು, ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶ್ವ ಕರ್ಮ ಜಯಂತಿ ಅಂಗವಾಗಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.
ಸೆ.17 ರಂದು ಬೆಳಿಗ್ಗೆ 11ಕ್ಕೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮoದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಎಲ್ಲಾ ಸಂಘ ಸಂಸ್ಥೆಯ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.
ಅoದು ಬೆಳಿಗ್ಗೆ ವಿಶ್ವಕರ್ಮ ಜಯಂತಿ ಅಂಗವಾಗಿ ನಗರದ ಕಾಳಿಕಾ ಕಮ್ಮಟೇಶ್ವರ ದೇವಸ್ಥಾನದಿಂದ ಬೆಂಗಳೂರು ರಸ್ತೆಯ ಹಳೆ ಬ್ರೂಸ್‌ಪೇಟೆ ಪೋಲಿಸ್ ಠಾಣೆ ಮುಂಭಾಗದಿoದ ತೇರು ಬಜಾರ್ ಮೂಲಕ ಹೆಚ್.ಆರ್ ಗವಿಯಪ್ಪ ವೃತ್ತದಿಂದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮoದಿರದ ವರೆಗೆ ನಡೆಯಲಿದೆ. ವಿಶ್ವ ಕರ್ಮ ಜಯಂತಿಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಜಯಂತಿಯ ಮೆರವಣಿಗೆಯಲ್ಲಿ ಸಾಂಸ್ಕೃತಿಕ ಕಲಾತಂಡಗಳು ಪಾಲ್ಗೊಳ್ಳಲಿವೆ. ವೇದಿಕೆ ಕಾರ್ಯಕ್ರಮದಲ್ಲಿ ಸುಗಮ ಸಂಗೀತ ಕಾರ್ಯಕ್ರಮ ಇರಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದರು.
ಕುಡಿಯುವ ನೀರಿನ ವ್ಯವಸ್ಥೆ, ಲಘು ಉಪಹಾರ, ಸ್ವಚ್ಛತೆ ಸೇರಿದಂತೆ ಇತರೆ ವ್ಯವಸ್ಥೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ, ಗಣ್ಯರನ್ನು ಆಹ್ವಾನಿಸಬೇಕು. ವಿಶ್ವಕರ್ಮ ಅವರ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಏರ್ಪಡಿಸಬೇಕು ಎಂದರು.
ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಎಲ್ಲಾ ಅಧಿಕಾರಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರು, ಗಣ್ಯರು ಉಪಸ್ಥಿತರಿದ್ದರು…

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend