ಕಿರಿಯರು ಮಾನವೀಯ ಮೌಲ್ಯ ಮೈಗೂಡಿಸಿಕೊಳ್ಳಬೇಕು: ನ್ಯಾ.ರಾಜೇಶ್ ಎನ್.ಹೊಸಮನೆ…!!!

Listen to this article

ಕಿರಿಯರು ಮಾನವೀಯ ಮೌಲ್ಯ ಮೈಗೂಡಿಸಿಕೊಳ್ಳಬೇಕು: ನ್ಯಾ.ರಾಜೇಶ್ ಎನ್.ಹೊಸಮನೆ

ಬಳ್ಳಾರಿ:ಪ್ರಸ್ತುತದಲ್ಲಿ ಕಿರಿಯರು ಹಿರಿಯರಿಗೆ ಗೌರವಕೊಡಲಾಗದ ಸ್ಥಿತಿ ನಿರ್ಮಾಣವಾಗಿ ಮಾನವೀಯ ಮೌಲ್ಯಗಳು ಕುಸಿಯುತ್ತಿವೆ. ಹಾಗಾಗಿ ಕಿರಿಯರು ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕಾಗಿದೆ ಎಂದು ಜಿಲ್ಲಾ ಕಾನುನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಹೇಳಿದರು.
ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ನಗರದ ಕಂಟೋನ್‌ಮೆAಟ್‌ನ ಶಾಂತಿ ಧಾಮ ಆವರಣದಲ್ಲಿ ಮಂಗಳವಾರ ಹಿರಿಯ ನಾಗರಿಕರಿಗಾಗಿ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಫರ್ಧೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ದೇಶ ಅಭಿವೃದ್ದಿ ಪಥದಲ್ಲಿ ಸಾಗುತ್ತಿದ್ದು, ಈ ಹಿಂದೆ ಕಿರಿಯರು ಹಿರಿಯರ ಮಾತುಗಳಿಗೆ ಗೌರವಕೊಡುತ್ತಿದ್ದರು. ಆದರೆ ಈಗ ಆ ಮೌಲ್ಯಗಳು ಕಾಣುತ್ತಿಲ್ಲ. ಹಿರಿಯ ನಾಗರಿಕರ ಅನುಭವದ ವಿಚಾರಧಾರೆಗಳೇ ಕಿರಿಯರಿಗೆ ದಾರಿ ದೀಪವಾಗಬೇಕು ಎಂದು ಅವರು ತಿಳಿಸಿದರು.
ಹಿರಿಯ ನಾಗರಿಕರನ್ನು ಕಡೆಗಣಿಸದೇ ಸಮಾಜದ ಅವಿಭಾಜ್ಯ ಅಂಗವೆoದು ಪರಿಗಣಿಸಬೇಕು. ಹಿರಿಯ ನಾಗರಿಕರ ಸಮಸ್ಯೆ-ಸಂಕಷ್ಟಗಳು ಏನೇ ಇದ್ದರೂ ಸಂಬAಧಿಸಿದ ಅಧಿಕಾರಿಗಳನ್ನು ಹಾಗೂ ಹಿರಿಯ ನಾಗರೀಕರ ಸಹಾಯವಾಣಿ ಕೇಂದ್ರವನ್ನು ಹಾಗೂ ಜಿಲ್ಲಾ ನ್ಯಾಯಾಧೀಶರನ್ನು ಸಂಪರ್ಕಿಸಬಹುದೆAದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ರಾಮಕೃಷ್ಣ ನಾಯಕ್.ಎಂ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಹೆಚ್.ಗೋವಿಂದಪ್ಪ ಅವರು ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಎನ್.ಡಿ. ವೆಂಕಮ್ಮ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧೀಕ್ಷಕಿಯರಾದ ನಂದಿನಿ, ಜೆ.ಸುವರ್ಣಲತಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಲೆ ನಾಗಪ್ಪ, ನಿರಾಶ್ರಿತರ ಪರಿಹಾರ ಕೇಂದ್ರ ಅಧೀಕ್ಷಕ ಕೆ.ಪಿ.ಚಿನ್ನಪಾಲಯ್ಯ, ಕುರುಗೋಡು ಸ್ಮೆಲ್ ಸಂಸ್ಥೆಯ ಅಧ್ಯಕ್ಷ ಉಮಾಪತಿ ಗೌಡ, ಪಣಿರಾಜ್ ಸೇರಿದಂತೆ ಹಿರಿಯ ನಾಗರಿಕರು ಹಾಗೂ ಇನ್ನೀತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರಿಗೆ ಪುರುಷ ಮತ್ತು ಮಹಿಳೆಯರಿಗೆ ಕ್ರೀಡಾ ಸ್ಫರ್ಧೆಗಳಾದ ನಡಿಗೆ ಸ್ಫರ್ಧೆ, ಮ್ಯೂಸಿಕಲ್ ಚೇರ್ ಸ್ಪರ್ಧೆ ಹಾಗೂ ಬಕೆಟ್‌ನಲ್ಲಿ ರಿಂಗ್ ಎಸೆಯುವುದು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಾದ ಗಾಯನ ಸ್ಫರ್ಧೆ ಮತ್ತು ಏಕಪಾತ್ರಭಿನಯ ಸ್ಫರ್ಧೆಗಳು ನಡೆದವು.

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend