ಪ್ರಜಾಪ್ರಭುತ್ವ ದಿನಾಚರಣೆಯ ಪೂರ್ವಭಾವಿ ಸಭೆ…!!!

Listen to this article

ಪ್ರಜಾಪ್ರಭುತ್ವ ದಿನಾಚರಣೆಯ ಪೂರ್ವಭಾವಿ ಸಭೆ

ಬೆಂಗಳೂರು: “ಪ್ರಜಾಪ್ರಭುತ್ವದ ಉಳಿವು, ಸ್ವಾತಂತ್ರ್ಯ, ಸಮಾನತೆ ಬಗ್ಗೆ ಅರಿವು ಮೂಡಿಸಲು ಸೆಪ್ಟೆಂಬರ್ 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆ ಅಂಗವಾಗಿ ರಾಜ್ಯ ಮಟ್ಟದಲ್ಲಿ ಮಾನವ ಸರಪಳಿ ರಚನೆ ಮಾಡಿ ವಿಶ್ವದಾಖಲೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕೆ ಎ ದಯಾನಂದ ಅವರು ತಿಳಿಸಿದರು.

ಇಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಚಾಲನೆ ನೀಡಲು ಪೂರ್ವ ಸಿದ್ಧತೆಯ ಬಗ್ಗೆ ಚರ್ಚಿಸಲು ಕರೆದಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಮಾಜ ಕಲ್ಯಾಣ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಬೆಂಗಳೂರು ನಗರ ಜಿಲ್ಲೆಯಲ್ಲಿ ಮಾನವ ಸರಪಳಿ ರಚಿಸಲು ಸುಮಾರು 41 ಸಾವಿರ ಜನರ ಅವಶ್ಯತೆ ಇರುವುದರಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಹಾಸ್ಟೆಲ್ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತರು, ಸ್ತ್ರೀ ಶಕ್ತಿ ಸಂಘಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರನ್ನು ಬಳಸಿಕೊಳ್ಳುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ಹೆಜ್ಜಾಲದಿಂದ ಹೊಸಕೋಟೆವರೆಗೆ ಸುಮಾರು 50 ಕಿಲೋಮೀಟರ್ ಮಾನವ ಸರಪಳಿ ರಚಿಸಲು ರೂಟ್ ಮ್ಯಾಪ್ ತಯಾರಿಸಿ ಹಾಗೂ ಪ್ರತಿ 3 ಕಿ.ಮೀ ಗೆ ಒಬ್ಬ ಜಿಲ್ಲಾ ಮಟ್ಟದ ಅಧಿಕಾರಿ, 1 ಕಿ.ಮೀಗೆ ತಾಲ್ಲೂಕು ಮಟ್ಟದ ಅಧಿಕಾರಿ ಹಾಗೂ 100 ಮೀಟರ್ ಗೆ ಒಬ್ಬರು ಶಿಕ್ಷಕರನ್ನು ಮಾನವ ಸರಪಳಿ ಸಡಿಲಗೊಳ್ಳದಂತೆ ನಿರ್ವಹಣೆ ಮಾಡಲು ನಿಯೋಜಿಸಿ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚಿಸಿದರು.

ವಾಹನ ವ್ಯವಸ್ಥೆ ಇರುವ ಖಾಸಗಿ ಶಾಲೆಗಳನ್ನು ಗುರುತಿಸಿ ಶಾಲಾ ಮಕ್ಕಳನ್ನು ಕರೆತರುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಲಕ್ಷ್ಮಣ್ ರೆಡ್ಡಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಅನಿತಾ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend