ಹಾಡುಹಗಲೇ ಸ್ಕ್ರೂಡ್ರೈವರ್‌ನಿಂದ ಯುವಕನಿಗೆ ಚುಚ್ಚಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿಯ ಮಹಾಂತೇಶ ನಗರದ ಬ್ರಿಡ್ಜ್ ಬಳಿ ನಡೆದಿದೆ…!!!

Listen to this article

ಬೆಳಗಾವಿ : ಹಾಡುಹಗಲೇ ಸ್ಕ್ರೂಡ್ರೈವರ್‌ನಿಂದ ಯುವಕನಿಗೆ ಚುಚ್ಚಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿಯ ಮಹಾಂತೇಶ ನಗರದ ಬ್ರಿಡ್ಜ್ ಬಳಿ ನಡೆದಿದೆ.

ಗಾಂಧಿನಗರ ನಿವಾಸಿ ಇಬ್ರಾಹಿಂ ಗೌಸ್ (22) ಮೃತ ಯುವಕ. ಮುಜಮಿಲ್ ಸತ್ತಿಗೇರಿ ಹತ್ಯೆ ಮಾಡಿದ ಆರೋಪಿ. ತೀವ್ರ ರಕ್ತಸ್ರಾವದಿಂದ ಕುಸಿದುಬಿದ್ದ ಇಬ್ರಾಹಿಂ ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ ಸ್ಥಳೀಯರು. ಆದರೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲೇ ಮೃತಪಟ್ಟಿರುವ ಇಬ್ರಾಹಿಂ.

ಘಟನೆ ಹಿನ್ನೆಲೆ..ಹತ್ಯೆಯಾದ ಇಬ್ರಾಹಿಂಗೂ ಅದೇ ಬಡಾವಣೆಯ ಮುಜಮಿಲ್ ಸತ್ತಿಗೇರಿ ಎಂಬುವವನ ಸಹೋದರಿಯೊಂದಿಗೆ ಲವ್ವಿಡವ್ವಿಯಲ್ಲಿ ತೊಡಗಿದ್ದಾನೆ. ಇದೇ ವಿಚಾರವಾಗಿ ಇಬ್ಬರ ನಡುವೆ ಜಗಳವಾಗಿದೆ. ಈ ಹಿಂದೆ ವಾರ್ನಿಂಗ್ ಕೊಟ್ಟಿದ್ದ ಎನ್ನಲಾಗಿದೆ. ಆದರೂ ಪ್ರೀತಿ, ಪ್ರೇಮ ಅಂತಾ ಮುಜಮಿಲ್ ಸಹೋದರಿಯಿಂದ ಬಿದ್ದಿದ್ದ. ಇಂದು ಸಹೋದರಿಯೊಂದಿಗೆ ಬೈಕ್‌ನಲ್ಲಿ ಹೊರಟಿದ್ದನ್ನು ನೋಡಿ ಇಬ್ರಾಹಿಂನ ಬೆನ್ನಟ್ಟಿ ಸ್ಕ್ರೂಡ್ರೈವರ್‌ನಿಂದ ಮನಬಂದಂತೆ ಚುಚ್ಚಿ ಹತ್ಯೆ ಮಾಡಿದ್ದಾನೆ. ಮಾಳ ಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

ವರದಿ. ಮಹಾಲಿಂಗ ಗಗ್ಗರಿ, ಬೆಳಗಾವಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend