ಸರ್ಕಾರದ ಮೊದಲ ವಿಕೆಟ್​ ಪತನ: ನಾಗೇಂದ್ರ ರಾಜಿನಾಮೆಗೆ ಸಿದ್ದರಾಮಯ್ಯ ಸೂಚನೆ ಬೆಂಗಳೂರು,…!!!!

Listen to this article

ಸರ್ಕಾರದ ಮೊದಲ ವಿಕೆಟ್​ ಪತನ: ನಾಗೇಂದ್ರ ರಾಜಿನಾಮೆಗೆ ಸಿದ್ದರಾಮಯ್ಯ ಸೂಚನೆ ಬೆಂಗಳೂರು,: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ ನಾಗೇಂದ್ರ ಅವರ ತಲೆದಂಡ ಅವರ ಹೆಸರು ಕೇಳಿ ಬರುತ್ತಿದ್ದು, ಸಚಿವರ ತಲೆದಂಡಕ್ಕೆ ವಿಪಕ್ಷಗಳು ಆಗ್ರಹಿಸಿದ್ದರು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರದ ಮೊದಲ ವಿಕೆಟ್​ ಪತನವಾಗಿದೆ
ಈ ಹಿನ್ನೆಲಯಲ್ಲಿ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ. ನಾಗೇಂದ್ರ ಅವರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ವಾಲ್ಮೀಕಿ ಅಭಿವೃದ್ಧಿ ನಿಮಗದ ಹಗರಣದಲ್ಲಿ ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರ ಹೆಸರು ಕೇಳಿಬಂದಿದೆ. ಬಿ. ನಾಗೇಂದ್ರ ಅವರು ರಾಜಿನಾಮೆ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ ಸರ್ಕಾರದ ಮೇಲೆ ಒತ್ತಡ ಹೇರಿತ್ತು. ಈ ಹಿನ್ನೆಲೆ ಕಾಂಗ್ರೆಸ್ ಸರ್ಕಾರದ ಮೇಲೆ ಒತ್ತಡ ಸೃಷ್ಠಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ. ನಾಗೇಂದ್ರ ಅವರಿಗೆ ರಾಜಿನಾಮೆ ನೀಡುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ವಾಲ್ಮೀಕಿ ಅಭಿವೃದ್ಧಿ ನಿಮಗದ ಹಗರಣದ ಬಗ್ಗೆ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಭೆ ನಡೆಸಿದ್ದರು. ಸಭೆಯಲ್ಲಿ ಸಚಿವ ಬಿ. ನಾಗೇಂದ್ರ ರಾಜೀನಾಮೆ ಬಗ್ಗೆ ಚರ್ಚೆ ನಡೆಯಿತು. ಈ ಪ್ರಕರಣದಿಂದ ವಿಪಕ್ಷಗಳ ಟೀಕೆ ಹೆಚ್ಚಾಗಿದ್ದು, ರಾಜೀನಾಮೆ ಕುರಿತು ಚರ್ಚಿಸಿದ್ದಾರೆ.

ಈ ಪ್ರಕರಣದಿಂದ ಸರ್ಕಾರಕ್ಕೆ ಮುಖಭಂಗವಾಬಾರದು ಹೀಗಾಗಿ ಬಿ.ನಾಗೇಂದ್ರ ರಾಜಿನಾಮೆ ನೀಡುವುದು ಒಳಿತು. ತನಿಖೆ ಪೂರ್ಣವಾದ ಬಳಿಕ ಮತ್ತೆ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವುದಾಗಿ ತೀರ್ಮಾನ ಕೈಗೊಂಡಿದ್ದಾರೆ ಎನ್ನಲಾಗಿದ್ದು, ಈ ಸಭೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ. ನಾಗೇಂದ್ರ ಅವರಿಗೆ, ಖುದ್ದು ತಾವೇ ಹೇಳಿಕೆ ನೀಡಿ ರಾಜೀನಾಮೆನೀಡುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಏನಿದು ಪ್ರಕರಣ ?

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಸುಮಾರು 80 ರಿಂದ 85 ಕೋಟಿ ಅನುದಾನ ದುರ್ಬಳಕೆಯಾಗಿದೆ. ಈ ಅವ್ಯವಹಾರದಿಂದ ಮನನೊಂದು ನಿಗಮದ ಅಧೀಕ್ಷಕ ಪ್ರಾಮಾಣಿಕ ಅಧಿಕಾರಿ ಚಂದ್ರಶೇಖರ್ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್​ನೋಟ್​ ನಲ್ಲಿ ಸಚಿವರ ಮೌಖಿಕ ಆದೇಶದಂತೆ ಅವ್ಯಹಾರ ನಡೆದಿದೆ ಎಂದು ಚಂದ್ರಶೇಖರ ಡೆತ್‌ ನೋಟ್‌ ನಲ್ಲಿ ತಿಳಿಸಿದ್ದಾರೆಇನ್ನೂ ಈ ಹಿಂದೆ ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಅವರ ಪ್ರಕರಣವನ್ನು ಮುಂದಿಟ್ಟುಕೊಂಡು ರಾಜ್ಯ ಬಿಜೆಪಿ ನಾಯಕರು ಸರ್ಕಾರ ಮೇಲೆ ಒತ್ತಡ ಹೇರಿದ್ದರು. ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣದಲ್ಲಿ ಕೆಎಸ್​ ಈಶ್ವರಪ್ಪ ರಾಜಿನಾಮೆ ನೀಡಿದ್ದರು. ಅದೇ ರೀತಿಯ ಘಟನೆ ಈಗ ನಡೆದಿದ್ದು, ಸಚಿವ ಬಿ. ನಾಗೇಂದ್ರ ರಾಜಿನಾಮೆಗೆ ಬಿಜೆಪಿ ಮತ್ತು ಜೆಡಿಎಸ್​ ಆಗ್ರಹಿಸಿದ್ದರು…

ವರದಿ. ಮಹಾಲಿಂಗ ಗಗ್ಗರಿ ಬೆಳಗಾವಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend