ಹಿರೇಬಾಗೇವಾಡಿಯ ಜೀವನಾಡಿ ಸಿದ್ಧನಬಾವಿ ಕೆರೆಗೆ ಬಾಗಿನ ಅರ್ಪಿಸಿದ ಸಚಿವೆ…!!!

Listen to this article

ಹಿರೇಬಾಗೇವಾಡಿಯ ಜೀವನಾಡಿ ಸಿದ್ಧನಬಾವಿ ಕೆರೆಗೆ ಬಾಗಿನ ಅರ್ಪಿಸಿದ ಸಚಿವೆ

ಬೆಳಗಾವಿ: ಈ ವರ್ಷ ಉತ್ತಮ ಮಳೆಯಾದ ಕಾರಣ ರಾಜ್ಯದ ಅಣೆಕಟ್ಟೆಗಳು ಭರ್ತಿಯಾಗಿ, ಕೆರೆ ಕಟ್ಟೆಗಳು ತುಂಬಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ತಾಲೂಕಿನ ಹಿರೇಬಾಗೇವಾಡಿಯ ಜೀವನಾಡಿ ಸಿದ್ಧನಬಾವಿ ಕೆರೆಗೆ ಬಾಗಿನ ಅರ್ಪಿಸಿ ಮಾತನಾಡಿದ ಸಚಿವರು, ಹಿರೇಬಾಗೇವಾಡಿ ಹಾಗೂ ಸುತ್ತಮತ್ತಲಿನ ಗ್ರಾಮಗಳ ಬಹುದಿನಗಳ ಬೇಡಿಕೆಯಾಗಿದ್ದ ಸಿದ್ಧನಭಾವಿ ಕೆರೆ ತುಂಬಿಸುವ ಯೋಜನೆ ಯಶಸ್ವಿಯಾಗಿದ್ದು, ಇಂದು ಗಂಗಾಮಾತೆಗೆ ಬಾಗಿನ ಅರ್ಪಿಸಿರುವುದು ಖುಷಿ ತಂದಿದೆ ಎಂದರು.
ಸಿದ್ಧನಬಾವಿ ಕೆರೆಯ ನೀರು ಸಂಗ್ರಹದಿಂದಾಗಿ ಬೋರ್ ವೆಲ್ ಗಳ ಅಂತರ್ಜಲ ವೃದ್ಧಿಯಾಗಲಿದೆ. ಇದರಿಂದ ಜನರಿಗೆ, ಜಾನುವಾರುಗಳಿಗೆ, ಸುತ್ತಮುತ್ತಲಿನ ರೈತರಿಗೆ ಸಹಾಯವಾಗಲಿದೆ. ಈ ಮೊದಲು ಕೆರೆ ತುಂಬಿಸುವ ಭರವಸೆ ನೀಡಿದ್ದೆ, ಇದೀಗ ನುಡಿದಂತೆ ಕೆರೆ ತುಂಬಿಸುವ ಕಾರ್ಯ ಮಾಡಲಾಗಿದೆ. 19 ಕೋಟಿ ರೂ‌. ವೆಚ್ಚದಲ್ಲಿ ಈ ಭಾಗದ ಕೆರೆಗಳನ್ನು ತುಂಬಿಸಲಾಗಿದೆ ಎಂದು ಸಚಿವೆ ಹೆಬ್ಬಾಳ್ಕರ್ ಹೇಳಿದರು.
ಈ ವರ್ಷ ಉತ್ತಮ ಮಳೆಯಾದ ಪರಿಣಾಮ ಇವತ್ತು ಎಲ್ಲ ಕೆರೆ ಕಟ್ಟೆಗಳು ತುಂಬಿದ್ದು, ರೈತರ ಮುಖದಲ್ಲಿ ಹರ್ಷದ ಹೊನಲು ಮೂಡಿದೆ. ಹಿರೇ ಬಾಗೇವಾಡಿ ಭಾಗದ ಜನರು ನನಗೆ ಹಿಂದಿನಿಂದಲೂ ಬೆಂಬಲ ನೀಡುತ್ತಾ ಬಂದಿದ್ದಾರೆ. ಈ ಭಾಗದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು…

ವರದಿ. ಮಹಾಲಿಂಗ ಗಗ್ಗರಿ, ಬೆಳಗಾವಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend