ಮೊಳಕಾಲ್ಮುರು: ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ.!

Listen to this article

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ಪಟ್ಟಣದ ಕೋವಿಡ್ ಮಾರ್ಗಸೂಚಿ ಪ್ರಕಾರ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ತಹಸೀಲ್ದಾರ್ ಟಿ.ಸುರೇಶ ಕುಮಾರ್ ಹೇಳಿದರು. ತಾಲೂಕು ಪಂಚಾಯಿತಿ ಸಭಾಂಗಣದಲ್ಲಿಮಂಗಳವಾರತಾಲೂಕು ಆಡಳಿತದಿಂದ ಆಯೋಜಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಕಳೆದೊಂದು ವರ್ಷದಿಂದ ಕೊರೋನಾ ವೈರಸ್ ಭೀತಿಯಿಂದಾಗಿ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಗಾಂಧಿ ಜಯಂತಿ ಸೇರಿ ವಿವಿಧ ರಾಷ್ಟ್ರೀಯ ಹಬ್ಬಗಳನ್ನು ಸರಳವಾಗಿ ಆಚರಿಸಲಾಗಿದೆ. ಅ.20ರಂದು ನಡೆಯುವ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಆಚರಣೆಗೆ ಕೋವಿಡ್ ಮಾರ್ಗಸೂಚಿಯಲ್ಲಿ ಕೆಲವು ವಿನಾಯಿತಿಗಳನ್ನು ಸರ್ಕಾರ ನೀಡಿದೆ. ಆ ಪ್ರಕಾರ ಕಾರ್ಯಕ್ರಮ ಆಯೋಜಿಸಲು ಸಮುದಾಯದ ಹಿರಿಯರು ಸಹಕಾರ ನೀಡಬೇಕು ಎಂದರು. ಕಾರ್ಯಕ್ರಮದಲ್ಲಿ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರ ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮ ಮತ್ತು ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ. ವಾಲ್ಮೀಕಿಯವರ ಬಗ್ಗೆ ಉಪನ್ಯಾಸ ನೀಡಬೇಕು. ತಾಲೂಕು ಕಚೇರಿ ಆವರಣದಿಂದ ಪ್ರಾರಂಭವಾಗುವ ಮೆರವಣಿಗೆ ಪ್ರಮುಖ ರಸ್ತೆಯಲ್ಲಿ ಸಾಗಿ ಮತ್ತೆ ವೇದಿಕೆಗೆ ಆಗಮಿಸಬೇಕು. ಕೇವಲ ಒಂದು ಗಂಟೆಯೊಳಗೆ ಮೆರವಣಿಗೆ ಸೀಮಿತಗೊಳಿಸಬೇಕು. ಕೊರೋನಾ ಬಿಗಿ ನಿಲುವಿನಿಂದಾಗಿ ಪ್ರತಿಯೊಬ್ಬರೂ ಸಾಮಾಜಿಕ ಅಂತರ ಕಾಪಾಡಿಕೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿ ಸಬೇಕು ಎಂದು ತಿಳಿಸಿದರು. ಸಚಿವ ಬಿ.ಶ್ರೀರಾಮುಲು ಆಪ್ತ ಸಹಾಯಕ ಪಾಪೇಶ್ ನಾಯಕ ಮಾತನಾಡಿದರು. ಸರ್ಕಲ್ ಇನ್ಸ್ಪೆಕ್ಟರ್ ಜೆ ಬಿ ಉಮೇಶ್ ನಾಯಕ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಯಾನಂದ್, ಜಿ.ಪಂ ಮಾಜಿ ಸದಸ್ಯರಾದ ಕೆ.ಜಗಳೂರಯ್ಯ, ವಿ.ಮಾರನಾಯಕ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಪಟೇಲ್ ಪಾಪನಾಯಕ, ಯುವ ಮುಖಂಡ ಗೋವಿಂದಪ್ಪ, ಬಿ.ವಿಜಯ್, ಬಡೋಬಯ್ಯ, ಜೀರಳ್ಳಿ ತಿಪ್ಪೇಸ್ವಾಮಿ, ಮಂಜುನಾಥ ಸ್ವಾಮಿ ನಾಯಕ, ಬಿಜಿ ಕೆರೆ ನಿಂಗಣ್ಣ, ಆನಂದ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು…

ವರದಿ. ಮಂಜುನಾಥ್, ಎಚ್

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend