ಕಾರೆಕೆರೆ ಕೃಷಿ ವಿದ್ಯಾರ್ಥಿಗಳಿಂದ ಸೋಮನಹಳ್ಳಿ ಗ್ರಾಮದಲ್ಲಿ ಕೃಷಿ ಕಲರವ…!!!

Listen to this article

ಕಾರೆಕೆರೆ ಕೃಷಿ ವಿದ್ಯಾರ್ಥಿಗಳಿಂದ ಸೋಮನಹಳ್ಳಿ ಗ್ರಾಮದಲ್ಲಿ ಕೃಷಿ ಕಲರವ
ಹಾಸನ:- ಕಾರಕೆರೆ ಕೃಷಿ ಮಹಾವಿದ್ಯಾಲಯದ ವತಿಯಿಂದ ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿಂದು ಗ್ರಾಮೀಣ ಸಹಭಾಗಿತ್ವ ಕಾರ್ಯಕ್ರಮ ನಡೆಯಿತು.
ಗ್ರಾಮದ ಎಚ್.ಡಿ ದೇವೇಗೌಡ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೃಷಿ ಕಾಲೇಜಿನ ವಿದ್ಯಾರ್ಥಿಗಳು ಗ್ರಾಮದ ನಕ್ಷೆ ತಯಾರಿಸಿ ಗ್ರಾಮದ ಮುಖಂಡರು ಹಾಗೂ ಮಹಿಳೆಯರಿಂದಲೇ ಗ್ರಾಮದ ಪ್ರಮುಖ ಸ್ಥಳಗಳನ್ನು ಗುರುತಿಸುವ ಮೂಲಕ ಗಮನ ಸೆಳೆದರು.
ಜೊತೆಗೆ ಹಳ್ಳಿ ಸೊಗಡಿನ ರಾಗಿ ಮಂಟಪ, ಚಲನವಲನ ನಕ್ಷೆ, ಬೆಳೆಗಳ ಗೋಪುರ, ಆದ್ಯತೆ ಶ್ರೇಣಿ, ಸಮಸ್ಯಾತ್ಮಕ ವೃಕ್ಷ, ಬೆಳೆ ಋತುಮಾನ ಚಕ್ರ, ಶ್ರೇಣಿ ಪದ್ಧತಿ, ವೃಕ್ಷ ಸ್ಥಾಪನೆ ಮಾಡುವ ಮೂಲಕ ಸಮಗ್ರ ಕೃಷಿ ಪದ್ದತಿ ಬಗ್ಗೆ ನಕ್ಷೆ ರಚಿಸಿ ಅದರ ಬಗ್ಗೆ ಗ್ರಾಮದ ಮುಖಂಡರು, ಮಹಿಳೆಯರು ಹಾಗೂ ಮಕ್ಕಳಿಗೆ ಮಾಹಿತಿ ನೀಡಿದರು.
ಈ ಬಗ್ಗೆ ಸೋಮನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಾಗೇಂದ್ರ ಅವರು ಮಾತನಾಡಿ, ಕಾರೆಕೆರೆ ಕೃಷಿ ಮಹಾವಿದ್ಯಾಲಯದ ವಿಧ್ಯಾರ್ಥಿಗಳು ನಮ್ಮ ಗ್ರಾಮಕ್ಕೆ ಬಂದಾಗಿನಿoದ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ, ವಿಧ್ಯಾರ್ಥಿ ಜೀವನದಲ್ಲೇ ರೈತರ ಸಮಸ್ಯೆಗಳು ಹಾಗೂ ಅವುಗಳಿಗೆ ಪರಿಹಾರ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಅನ್ವೇಷಣೆಗೆ ಮುಂದಾಗಿರುವ ವಿಧ್ಯಾರ್ಥಿಗಳ ನಡೆ ಶ್ಲಾಘನೀಯ ಎಂದರು.
ಗ್ರಾಮೀಣ ರೈತರಿಗೆ ಮಣ್ಣಿನ ಮಹತ್ವ, ರಾಸಾಯನಿಕ ಗೊಬ್ಬರಗಳಿಂದ ಆಗುವ ಅಪಾಯ, ಕೃಷಿ ಚಟುವಟಿಕೆಗಳಲ್ಲಿ ಅನುಸರಿಸಬೇಕಾದ ಸಾವಯವ ಪದ್ಧತಿ, ಸಾವಯವ ಕೃಷಿಯ ಉಪಯೋಗ ಹೀಗೆ ವಿವಿಧ ವಿಚಾರಗಳ ಬಗ್ಗೆ ರೈತರಿಗೆ ತೊಳಿಸಿಕೊಟ್ಟು ಆರೋಗ್ಯಕರ ಕೃಷಿ ಉತ್ಪನ್ನಗಳನ್ನು ಬೆಳೆಯಲು ಅನೇಕ ಸಲಹೆಗಳನ್ನು ನೀಡಿದ್ದಾರೆ ಎಂದರು.
ದೇವೇಗೌಡ ಸಭಾಂಗಣದಲ್ಲಿ ಆಯೋಜಿಸಿದ್ದ ಗ್ರಾಮೀಣ ಸಹಭಾಗಿತ್ವ ಅಧ್ಯಯನ ಕಾರ್ಯಕ್ರಮ ವಿಶೇಷ ಗಮನ ಸೆಳೆಯಿತು. ಗ್ರಾಮದ ರೈತರು ಹಾಗೂ ಮಹಿಳೆಯರ ಸಹಭಾಗಿತ್ವದಲ್ಲಿ ಗ್ರಾಮದ ನಕ್ಷೆ ರಚಿಸಿ ಅದರಲ್ಲಿ ಸಾರ್ವಜನಿಕ ಸ್ಥಳಗಳನ್ನು ಗುರುತಿಸುವ ಮೂಲಕ ವಿಶೇಷ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ಕಾರ್ಯಕ್ರಮ ಗಮನ ಸೆಳೆದಿದೆ. ಮುಂದಿನ ದಿನಗಳಲ್ಲಿ ಕೂಡ ನಮ್ಮ ಗ್ರಾಮದ ಎಲ್ಲರ ಸಹಕಾರ ವಿದ್ಯಾರ್ಥಿಗಳಿಗೆ ಇರಲಿದೆ ಎಂದು ಭರವಸೆ ನೀಡಿದರು.
ಕಾರೆಕೆರೆ ಕೃಷಿ ಮಹಾವಿದ್ಯಾಲಯದ ಬೇಸಾಯ ಶಸ್ತ್ರ ವಿಭಾಗದ ಪ್ರಾಧ್ಯಾಪಕ ಸದಾಶಿವನಗೌಡ ಮಾತನಾಡಿ, ನಮ್ಮ ಕಾಲೇಜಿನ ಅಂತಿಮ ವರ್ಷದ ವಿಧ್ಯಾರ್ಥಿಗಳು ಗ್ರಾಮಕ್ಕೆ ಭೇಟಿ ನೀಡಿ ಸತತ ಮೂರು ತಿಂಗಳು ಇಲ್ಲೇ ನೆಲೆಸಿ ಗ್ರಾಮದಲ್ಲಿನ ಕೃಷಿ ಚುವಟಿಕೆಗಳಲ್ಲಿ ಇರುವ ಸಮಸ್ಯೆಗಳ ಬಗ್ಗೆ ಅಧ್ಯಯನ ಮಾಡಿ ಅವುಗಳಿಗೆ ಪರಿಹಾರ ಮಾರ್ಗೋಪಾಯದ ಬಗ್ಗೆ ಗ್ರಾಮದ ರೈತರಿಗೆ ಮಾಹಿತಿ ನೀಡುವ ಕೆಲಸ ಮಾಡುತ್ತಿದ್ದಾರೆ.
ಅದೇ ರೀತಿ ಇಂದು ಗ್ರಾಮೀಣ ಸಹಭಾಗಿತ್ವ ಅಧ್ಯಯನ ಎಂಬ ಕಾರ್ಯಕ್ರಮದ ಅಡಿಯಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಗ್ರಾಮದ ರೈತರು ಸಕಾರಾತ್ಮಕವಾಗಿ ಸ್ಪಂದಿಸಿ ಕೃಷಿ ವಿಧ್ಯಾರ್ಥಿಗಳಿಗೆ ಎಲ್ಲಾ ರೀತಿಯ ಸಹಕಾರ ನೀಡುತ್ತಿದ್ದಾರೆ ಜೊತೆಗೆ ಕೃಷಿ ಕ್ಷೇತ್ರದಲ್ಲಿನ ಸಮಸ್ಯೆಗಳಿಗೆ ಉಪಯುಕ್ತ ಮಾಹಿತಿ ಪಡೆಯುವ ಮೂಲಕ ವಿಧ್ಯಾರ್ಥಿಗಳಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಕಬ್ಬಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪುಟ್ಟರಾಜು, ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಮೇಶ್, ನಿರ್ದೇಶಕ ರಾಮೇಗೌಡ, ಗ್ರಾಮಸ್ಥರಾದ ಪುಟ್ಟಸ್ವಾಮಿ ಗೌಡ ಹಾಗೂ ಕೃಷಿ ಕಾಲೇಜು ವಿದ್ಯಾರ್ಥಿಗಳು ಮತ್ತಿತರು ಉಪಸ್ಥಿತಿಲಿದ್ದರು….

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend