ಬಾಲಕಿಯ ಅತ್ಯಾಚಾರ, ದೂರು ದಾಖಲೆಸಿದ್ದಕ್ಕೆ ಸವರ್ಣಿಯರಿಂದ ದಲಿತ ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ…!!!

Listen to this article

ಬಾಲಕಿಯ ಅತ್ಯಾಚಾರ, ದೂರು ದಾಖಲೆಸಿದ್ದಕ್ಕೆ ಸವರ್ಣಿಯರಿಂದ ದಲಿತ ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬಪ್ಪರಗಾ ಗ್ರಾಮದಲ್ಲಿ 14 ವರ್ಷದ ದಲಿತ ಸಮುದಾಯದ ಬಾಲಕಿಯ ಮೇಲೆ ಅತ್ಯಾಚಾರ ಎಸಿಗಿದ್ದ ಆರೋಪದ ಮೇಲೆ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಸಂದಾನಕ್ಕೆ ಒಪ್ಪದ ಕುಟುಂಬ ಮತ್ತು ದಲಿತ ಕುಟುಂಬಗಳಿಗೆ ಸವರ್ಣಿಯರು ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬಪ್ಪರಗಾ ಗ್ರಾಮದಲ್ಲಿ ನಡೆದಿದೆ.
ತಮ್ಮ ಮಾತಿನಂತೆ ಸಂಧಾನಕ್ಕೆ ಒಪ್ಪದೇ ದೂರು ನೀಡಿದರು ಎಂಬ ಕಾರಣಕ್ಕೆ ದಲಿತ ಕುಟುಂಬವನ್ನು ಬಹಿಷ್ಕರಿಸುವ ಸವರ್ಣೀಯರು, ಗ್ರಾಮದ ಅಂಗಡಿಗಳಲ್ಲಿ ದಿನಸಿ ಸಾಮಗ್ರಿ ನೀಡದಂತೆ ಷರತ್ತು ವಿಧಿಸಿದ್ದಾರೆ. ಈ ಸಾಮಾಜಿಕ ಬಹಿಷ್ಕಾರದಿಂದಾಗಿ ಗ್ರಾಮದ ಸಮುದಾಯದ ಮಕ್ಕಳಿಗೆ ಅಗತ್ಯವಿರುವ ಪೆನ್ನು ನೋಟ್ ಬುಕ್ಕು ಮತ್ತು ದೈನಂದಿನ ದಿನಸಿ ಸಾಮಗ್ರಿ ಸಿಗದೆ ಹಲವು ಕುಟುಂಬಗಳು ಪರದಾಡುತ್ತಿದವೆ. ಗ್ರಾಮದಲ್ಲಿ ಕಡಿಮೆ ಸಂಖ್ಯೆಯಲ್ಲಿರುವ ದಲಿತರು, ಇದೀಗ ಸಾಮಾಜಿಕ ಬಹಿಷ್ಕಾರದಿಂದಾಗಿ ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ.
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸೆಗಿ, ಆಕೆ ಗರ್ಭಿಣಿಯಾಗಲು ಕಾರಣನಾಗಿದ್ದ ಯುವಕನ ಮೇಲೆ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು. ಆರೋಪಕ್ಕೆ ಸಂಬಂಧಿಸಿದ ಸಂತ್ರಸ್ತೆ ಕುಟುಂಬಸ್ಥರು ಸಂಧಾನಕ್ಕೆ ಒಪ್ಪದೇ, ಯುವಕನ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಿದ್ದರಿಂದ ಕೋಪಗೊಂಡ ಗ್ರಾಮದ ಸವರ್ಣಿಯರು ಇಡೀ ಗ್ರಾಮದ ದಲಿತರಿಗೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ.
ಗ್ರಾಮದಲ್ಲಿ ದಲಿತ ಸಮುದಾಯದವರಿಗೆ ದಿನಸಿ ಹಾಗೂ ಮತ್ತಿತರ ದೈನಂದಿನ ಬಳಕೆ ವಸ್ತುಗಳನ್ನು ಮಾರಾಟ ಮಾಡದಂತೆ ಕಟ್ಟಪ್ಪಣೆ ಹೊರಡಿಸಲಾಗಿದೆ ಎನ್ನಲಾಗಿದೆ. ಉಪ್ಪು ಖರೀದಿಸಲು ಅಂಗಡಿಯೊಂದಕ್ಕೆ ತೆರಳಿದ ದಲಿತ ಮಹಿಳೆ ಮತ್ತು ಪೆನ್ನು ಖರೀದಿಸಲು ತೆರಳಿದ ಶಾಲೆ ಮಕ್ಕಳಿಗೆ ಅಂಗಡಿ ಮಾಲೀಕರು ಬಹಿಷ್ಕಾರ ಹಾಕಿರುವ ವಿಚಾರವನ್ನು ಹೇಳಿದ್ದಾರೆ ಎನ್ನಲಾಗಿದೆ. ಇಂಥ ಬಹಿಷ್ಕಾರ ಕುರಿತ ಧ್ವನಿ ಮುದ್ರಿಕೆ (ಆಡಿಯೋ ವಾಯ್ಸ್) ಇದೀಗ ವೈರಲ್ ಆಗಿದ್ದು ಅದರಲ್ಲಿ ಯಾವುದೇ ತರಹದ ವಸ್ತುಗಳು ನೀಡಬಾರದು ಎಂದು ತಮಗೆ ಗ್ರಾಮದ ಪ್ರಮುಖರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎಂದು ಅಂಗಡಿಯವರು ಅಸಹಾಯಕತೆಯ ವ್ಯಕ್ತಪಡಿಸಿದ್ದಾರೆ.
ಶಾಲೆಗೆ ಹೊರಟಿರುವ ಮಕ್ಕಳಿಗಾದರೂ ಪೆನ್ನು ಪೆನ್ಸಿಲ್ ಆದ್ರೂ ನೀಡಿ ಎಂದು ಯುವಕರು ಕೇಳಿಕೊಂಡಿದ್ದಕ್ಕೆ ಕೊಡುವುದಿಲ್ಲಪ್ಪ ಎಂದು ಅಂಗಡಿ ಮಾಲೀಕನು ತಿಳಿಸಿದ್ದಾನೆ. ಪೆನ್ನು ಪುಸ್ತಕವಷ್ಟೇ ಅಲ್ಲ ನಿಮ್ಮ ಮಂದಿಗೆ(ದಲಿತರು) ಯಾವುದನ್ನು ಕೊಡಬಾರದು ಎಂದು ಆಜ್ಞೆಯಾಗಿದೆ ಎಂದು ತಿಳಿಸಿದ್ದಾರೆ. ಈ ಸಾಮಾಜಿಕ ಕೌರ್ಯದಿಂದಾಗಿ ಬೆರಳೆಣಿಕೆಯಷ್ಟಿರುವ ಬಪ್ಪರಾಗ ಗ್ರಾಮದ ದಲಿತ ವರ್ಗದಲ್ಲಿ ಆತಂಕ ಮನೆ ಮಾಡಿದೆ.
ಬಪ್ಪರಗಾ ಗ್ರಾಮದ 15 ವರ್ಷದ ಬಾಲಕಿಯನ್ನು ಮದುವೆಯಾಗುವುದಾಗಿ ಪುಸಲಾಯಿಸಿದ್ದ ಪ್ರಬಲ ಜಾತಿ ಯುವಕನೊಬ್ಬ ಆಕೆ ಜೊತೆಗೆ ಲೈಂಗಿಕ ಸಂಪರ್ಕ ಬೆಳೆಸಿದ್ದ ಆಕೆ 5 ತಿಂಗಳ ಗರ್ಭಿಣಿಯಾಗಿದ್ದು ಮದುವೆಗೆ ನಿರಾಕರಿಸಿದ್ದ.
ಈ ಸಂಬಂಧ ಒಂದು ತಿಂಗಳ ಹಿಂದೆ ನಾರಾಯಣಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಬಾಲಕಿಯ ತಾಯಿ ಪ್ರಕರಣ ದಾಖಲಿಸಿದ್ದರು ಈ ಬಗ್ಗೆ ತಮ್ಮೆದುರು ಸಂಧಾನಕ್ಕೆ ಬರುವ ಬದಲು ನೇರವಾಗಿ ಠಾಣೆಗೆ ತರಲಿ ದೂರು ದಾಖಲಿಸಿದ್ದಕ್ಕೆ ಆಕ್ರೋಶಗೊಂಡ ಸವರ್ಣಿಯರು ಇಡೀ ದಲಿತ ಸಮುದಾಯಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ ಎನ್ನಲಾಗಿದೆ
ಪರಿಶಿಷ್ಟ ಸಮುದಾಯದ ಜನರ ಜೊತೆಗೆ ಯಾವುದೇ ರೀತಿಯ ವ್ಯವಹಾರ ಮಾಡದಂತೆ ಎಲ್ಲಾ ಅಂಗಡಿಗಳಿಗೆ ತಾಕೀತು ಮಾಡಿ ನಮಗೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ ದಿನಸಿ ಪದಾರ್ಥಗಳ ಅಷ್ಟೇ ಅಲ್ಲ ಶಾಲಾ ಮಕ್ಕಳಿಗೆ ಪೆನ್ ನೋಟ್ ಬುಕ್ಕು ಸೇರದಂತೆ ಯಾವುದೇ ಸಾಮಗ್ರಿಗಳನ್ನು ಮಾರಾಟ ಮಾಡುತ್ತಿಲ್ಲ ಎಂದು ಬಪ್ಪರಾಗ ಗ್ರಾಮದ ದಲಿತರು ಮಾಧ್ಯಮಗಳಿಗೆ ತಿಳಿಸಿದರು…


ವರದಿ. ಮ್ಯಾಗೇರಿ ಸಂತೋಷ ಹೂವಿನಹಡಗಲಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend