ಪತ್ನಿಯನ್ನು ಕೊಲೆ ಮಾಡಿದ್ದ ಆರೋಪಿಯನ್ನು 35 ವರ್ಷದ ನಂತರ ಬಂಧಿಸಿದ ಪೊಲೀಸರು…!!!

Listen to this article

ಪತ್ನಿಯನ್ನು ಕೊಲೆ ಮಾಡಿದ್ದ ಆರೋಪಿಯನ್ನು 35 ವರ್ಷದ ನಂತರ ಬಂಧಿಸಿದ ಪೊಲೀಸರು
ತಿಪಟೂರು: ಸೀಮೆಎಣ್ಣೆ ಸುರಿದು ಹೆಂಡತಿಗೆ ಬೆಂಕಿ ಹಚ್ಚಿ ನಾಪತ್ತೆಯಾಗಿದ್ದ ಆರೋಪಿ ಪತಿಯನ್ನು 35 ವರ್ಷಗಳ ನಂತರ ನೊಣವಿನಕೆರೆ ಪೊಲೀಸರು ಬಂಧಿಸಿದ್ದಾರೆ.

ತಿಪಟೂರು ತಾಲೂಕು ಕುಡುವನಘಟ್ಟ ಗ್ರಾಮದಲ್ಲಿ 35 ವರ್ಷಗಳ ಹಿಂದೆ ನಡೆದಿದ್ದ ಘಟನೆಯಾಗಿದೆ. 35 ವರ್ಷಗಳ ಹಿಂದೆ ಕ್ಷುಲ್ಲಕ ಕಾರಣಕ್ಕೆ ಹೆಂಡತಿ ಗೌರಮ್ಮ ಮೇಲೆ ಸೀಮೆಎಣ್ಣೆ ಸುರಿದು ಪತಿ ನಿಂಗಪ್ಪ ಬೆಂಕಿ ಹಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದನು.

ಬಳಿಕ 35 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ನಿಂಗಪ್ಪ ಇತ್ತೀಚೆಗೆ ಗ್ರಾಮಕ್ಕೆ ಹಿಂತಿರುಗಿರೋದು ಮಾಹಿತಿ ಪೊಲೀಸರಿಗೆ ಲಭಿಸಿತ್ತು. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.
ಈ ಸಂಬಂಧ ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು…

 

ವರದಿ ಮ್ಯಾಗೇರಿ ಸಂತೋಷ ಹೂವಿನಹಡಗಲಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend