ಮಿಷನ್ ಶಕ್ತಿ ಯೋಜನೆಯಡಿ ವಿಶೇಷ ಜಾಗೃತಿ ಹೊಳಲ್ಕೆರೆ: ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ…!!!

Listen to this article

ಮಿಷನ್ ಶಕ್ತಿ ಯೋಜನೆಯಡಿ ವಿಶೇಷ ಜಾಗೃತಿ
ಹೊಳಲ್ಕೆರೆ: ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ
ಚಿತ್ರದುರ್ಗ:ಮಿಷನ್ ಶಕ್ತಿ ಯೋಜನೆಯಡಿ 100 ದಿನಗಳ ವಿಶೇಷ ಜಾಗೃತಿ ಹಾಗೂ ನೊಂದಣಿ ಅಭಿಯಾನದ 14ನೇ ವಾರದ ಅಂಗವಾಗಿ ಹೊಳಲ್ಕೆರೆ ಶಿಶು ಅಭಿವೃದ್ಧಿ ಯೋಜನೆ ಹಾಗೂ ಬಾಲಿಕಾ ಪ್ರೌಢಶಾಲೆ ಸಹಯೋಗದಲ್ಲಿ ಗುರುವಾರ ಹೊಳಲ್ಕೆರೆಯ ಟಿ.ಪಿ.ಸಿ.ಕೆ ಬಾಲಿಕಾ ಪ್ರೌಢಶಾಲೆಯಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಪ್ರಬಂಧ ಸ್ಪರ್ಧೆ, ಚರ್ಚಾ ಸ್ಪರ್ಧೆ, ಇಂಧನ ರಹಿತ ಅಡುಗೆ ತಯಾರಿಕೆ, ಚಿತ್ರಕಲಾ ಸ್ಪರ್ಧೆಗಳನ್ನು ಆಯೋಜಿಸಿ, ವಿಜೇತರಾದ ವಿದ್ಯಾರ್ಥಿನಿಯರಿಗೆ ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.
ಈ ವೇಳೆ ಮಹಿಳಾ ಸಬಲೀಕರಣ ಘಟಕದ ಜೆಂಡರ್ ಸ್ಪೆಷಲಿಸ್ಟ್ ಗೀತಾ ಮಾತನಾಡಿ, ಯೋಜನೆಯ ಉದ್ದೇಶ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ, ಹೆಣ್ಣು ಮಕ್ಕಳ ಕಳ್ಳ ಸಾಗಾಣಿಕೆ ಹಾಗೂ ಮಕ್ಕಳ ಮೇಲೆ ಆಗುತ್ತಿರುವ ದೌರ್ಜನ್ಯ ತಡೆ ವಿಚಾರವಾಗಿ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಒದಗಿಸುತ್ತಿರುವ ಮಕ್ಕಳ ಸಹಾಯವಾಣಿ ಸಂಖ್ಯೆ-1098, ಮಹಿಳಾ ಸಹಾಯವಾಣಿ ಸಂಖ್ಯೆ-181, ಪೊಲೀಸ್ ಸಹಾಯವಾಣಿ ಸಂಖ್ಯೆ-112 ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಬಾಲಿಕಾ ಪ್ರೌಢಶಾಲೆ ಮುಖ್ಯೋಪಾದ್ಯಾಯ ಎಚ್.ಎಸ್.ಮಹೇಶ್ವರಪ್ಪ, ಶಿಕ್ಷಕಿಯರಾದ ಜೆ.ವೀಣಾ, ಕೋಮಲ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಮತಾ, ಜಿಲ್ಲಾ ಮಿಷನ್ ಸಂಯೋಜಕರಾದ ಬಿ.ವಿನಯ್ ಮತ್ತು ಪೋಷಣ್ ಅಭಿಯಾನ ಸಂಯೋಜಕರಾದ ಸಂತೋಷ್ ಹಾಗೂ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು…

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend